ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಕಂಟೈನ್ಮೆಂಟ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೇ ಇರಲು ರಾಜ್ಯ ಸರಕಾರ ಮುಂದಾಗಿದೆ. ಈ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ನಡೆಸಲಾಗುವುದು. ಅಲ್ಲದೇ ಶಾಲೆಗಳನ್ನು ಪುನರಾರಂಭ ಮಾಡುವ ಕುರಿತು ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳುವುದಾಗಿ ಪ್ರೌಢ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ನಡೆಸುವುದು ಅನಿವಾರ್ಯ. ಮಕ್ಕಳ ಹಿತಕಾಪಾಡುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಪರೀಕ್ಷೆ ನಡೆಸಲಾಗುತ್ತಿದೆ. ಆದರೆ ಕಂಟೈನ್ಮೆಂಟ್ ವಿದ್ಯಾರ್ಥಿಗಳಿಗೆ ಪರೀಕ್ಷೆ ಇರುವುದಿಲ್ಲ. ಕಂಟೈನ್ಮೆಂಟ್ ಪ್ರದೇಶದಲ್ಲಿರುವ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯ ವೇಳೆಯಲ್ಲಿ ಪರೀಕ್ಷೆ ಬರೆಯಲು ಅನುಮತಿಯನ್ನು ನೀಡಲಾಗುತ್ತದೆ. ಆ ಸಂದರ್ಭದಲ್ಲಿ ಹೊಸದಾಗಿ ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ನೀಡಲಾಗುತ್ತದೆ.

ಜುಲೈ 4ರ ಒಳಗಾಗಿ ಪರೀಕ್ಷೆಗಳು ಮುಕ್ತಾಯವಾಗಲಿದ್ದು, ಜುಲೈ 31ರ ಒಳಗಾಗಿ ಫಲಿತಾಂಶವನ್ನು ನೀಡಲಾಗುತ್ತದೆ. ಅಲ್ಲದೇ ಶಾಲೆಗಳನ್ನು ಆರಂಭಿಸುವ ಕುರಿತು ಶೀಘ್ರದಲ್ಲಿಯೇ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.