ಕೊರೊನಾ ನಿಯಂತ್ರಣಕ್ಕೆ ಬಂದ ನಂತರ ದ್ವಿತೀಯ ಪಿಯುಸಿ ಪರೀಕ್ಷೆ : ಸಚಿವ ಸುರೇಶ್ ಕುಮಾರ್

ಬೆಂಗಳೂರು : ಪದವಿಪೂರ್ವ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ದ್ವಿತೀಯ ಪಿಯು ಪರೀಕ್ಷೆಗಳನ್ನು ನಡೆಸುವುದು ಉತ್ತಮ. ಹೀಗಾಗಿ ಕೊರೊನಾ ವೈರಸ್ ಸೋಂಕು ನಿಯಂತ್ರಣಕ್ಕೆ ಬಂದ ನಂತರದಲ್ಲಿ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆಯ ಕುರಿತು ಚರ್ಚಿಸುವ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಇಲಾಖೆ ಎಲ್ಲಾ ರಾಜ್ಯಗಳ ಶಿಕ್ಷಣ ಸಚಿವರ ಸಭೆಯನ್ನು ಆಯೋಜಿಸಿತ್ತು. ಸಭೆಯಲ್ಲಿ ಪಾಲ್ಗೊಂಡಿದ್ದ ಸಚಿವ ಸುರೇಶ್ ಕುಮಾರ್ ಅವರು ವೃತ್ತಿಪರ ಶಿಕ್ಷಣಕ್ಕೆ ಸನ್ನದ್ಧರಾಗುವ ಹಂತದಲ್ಲಿರುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಯಾವುದಾದರೂ ಮಾದರಿಯಲ್ಲಿ ಪರೀಕ್ಷೆಗಳನ್ನು ನಡೆಸಬೇಕಾದ್ದು ಅನಿವಾರ್ಯ. ಕೋವಿಡ್ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದ ನಂತರದಲ್ಲಿ ಪರೀಕ್ಷೆ ನಡೆಸುವುದು ಸೂಕ್ತ ಎಂದಿದ್ದಾರೆ.

ಪರೀಕ್ಷೆಯನ್ನು ಆಯೋಜನೆ ಮಾಡುವ ಸುಮಾರು 20 ದಿನಗಳ ಮುಂಚೆಯೇ ವೇಳಾಪಟ್ಟಿಯನ್ನು ಪ್ರಕಟಿಸಲು ತೀರ್ಮಾನಿಸಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಪರೀಕ್ಷಾ ಪ್ರಕ್ರಿಯೆಯನ್ನು ಸರಳೀಕರಣಗೊಳಿಸುವ ಒತ್ತಡ ಕೇಳಿಬರುತ್ತಿದೆ. ಪರೀಕ್ಷೆಯನ್ನು ಸರಳೀಕೃತ ಮಾದರಿಯಲ್ಲಿ ನಡೆಸಲು ಸುಮಾರು 45 ದಿನಗಳ ಕಾಲಾವಕಾಶ ಬೇಕಾಗುತ್ತದೆ. ಅಲ್ಲದೇ ಕೇಂದ್ರ ಸರಕಾರ ಕೂಡ ಪರೀಕ್ಷೆಯಲ್ಲಿ ಬದಲಾವಣೆಗಳನ್ನು ತರುವ ಸಾಧ್ಯತೆಯಿದೆ. ಇನ್ನು ಪರೀಕ್ಷೆ ಎದುರಿಸಲು ಅಸಾಧ್ಯವಾಗುವ ವಿದ್ಯಾರ್ಥಿಗಳಿಗಾಗಿ ಪೂರಕ ಪರೀಕ್ಷೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದಿದ್ದಾರೆ. ಜುಲೈ ಅಂತ್ಯದಲ್ಲಿ ಪರೀಕ್ಷೆಯನ್ನು ನಡೆಸಲು ಸಾಧ್ಯವಾದ್ರೆ ಅಗಸ್ಟ್ ತಿಂಗಳಲ್ಲಿ ಪರೀಕ್ಷೆ ಫಲಿತಾಂಶ ಘೋಷಣೆ ಮಾಡಲು ಸಾಧ್ಯವಾಗುತ್ತದೆ. ಅಲ್ದಲೇ ಅಗಸ್ಟ್ ತಿಂಗಳಿನಲ್ಲಿಯೇ ಜೆಇಇ, ನೀಟ್, ಸಿಇಟಿ ಹಾಗೂ ಐಸಿಎಆರ್ ಪರೀಕ್ಷೆ ನಡೆಯುವ ಸಾಧ್ಯತೆಯಿದೆ ಎಂದಿದ್ದಾರೆ.

ವಿವಿಧ ರಾಜ್ಯಗಳ ಶಿಕ್ಷಣ ಸಚಿವರು ತಮ್ಮ ರಾಜ್ಯಗಳ ಸ್ಥಿತಿಗತಿಗಳನ್ನು ಗಮನಕ್ಕೆ ತಂದರು. ಬಹುಪಾಲು ಸಚಿವರು ಪರೀಕ್ಷೆಗಳನ್ನು ನಡೆಸಲೇಬೇಕೆಂದು ಪ್ರತಿಪಾದಿಸಿದರು. ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ ಸಿಂಗ್, ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್, ಜವಳಿ ಸಚಿವೆ ಸ್ಮೃತಿ ಇರಾನಿ,

Comments are closed.