ರಾಜ್ಯಾದ್ಯಂತ 6-9ನೇ ತರಗತಿಗಳು ಬಂದ್ : ರಾಜ್ಯ ಸರಕಾರದ ಅಧಿಕೃತ ಆದೇಶ

ಬೆಂಗಳೂರು :  ಕೊರೊನಾ ವೈರಸ್ ಎರಡನೇ ಅಲೆಯ ಹಿನ್ನೆಲೆಯಲ್ಲಿ 6-9ನೇ‌ ತರಗತಿಗಳನ್ನು ಬಂದ್ ಮಾಡಿ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.

ರಾಜ್ಯದಲ್ಲಿನ ಸರಕಾರಿ, ಅನುದಾನಿತ ಹಾಗೂ ಅನುದಾನ‌ರಹಿತ ಶಾಲೆಗಳಲ್ಲಿನ 6-9ನೇ ತರಗತಿಗಳನ್ನು ಬಂದ್ ಮಾಡಲಾಗಿದ್ದು ಮುಂದಿನ ಆದೇಶದ ವರೆಗೆ ತರಗತಿ ನಡೆಸದಂತೆ ಸರಕಾರ ಆದೇಶಿಸಿದೆ. ಆದರೆ ಅನ್ ಲೈನ್ ತರಗತಿ ನಡೆಸಲು ಅವಕಾಶ ಕಲ್ಪಿಸಲಾಗಿದ್ದು, 10, 11 ಹಾಗೂ‌ 12ನೇ‌ ತರಗತಿಗಳು ಎಂದಿನಂತೆ ನಡೆಯಲಿದೆ.

ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಈ ನಿರ್ಧಾರಕ್ಕೆ ಬರಲಾಗಿದ್ದು, ಎಸ್ಎಸ್ಎಲ್ ಸಿ ತರಗತಿಗಳು ನಡೆಯುತ್ತಿದ್ದರೂ ಕೂಡ ತರಗತಿಗಳಿಗೆ ಕಡ್ಡಾಯ ಹಾಜರಾತಿಯಿಂದ ವಿನಾಯಿತಿ ನೀಡಲಾಗಿದೆ. 6 – 9 ನೇ‌‌ ತರಗತಿಗಳಿಗೆ ಸಂಬಂಧಿಸಿದಂತೆ ಮೌಲ್ಯಾಂಕನ ಪರೀಕ್ಷೆಗಳಿಗೆ ನಡೆಸುವ ಕುರಿತು ಮುಂದಿನ ದಿನಗಳಲ್ಲಿ ಕ್ರಮಕೈಗೊಳ್ಳುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

Comments are closed.