ನವದೆಹಲಿ : ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಅಂತಿಮ ಪದವಿ ಪರೀಕ್ಷೆಗಳನ್ನು ನಡೆಸಲು ಕೇಂದ್ರ ಸರಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ.

ದೇಶದಾದ್ಯಂತ ಕೊರೊನಾ ಸೋಂಕು ಹೆಚ್ಚಿದ ಹಿನ್ನೆಲೆಯಲ್ಲಿ ಪ್ರಥಮ ಹಾಗೂ ದ್ವಿತೀಯ ವರ್ಷದ ಪರೀಕ್ಷೆಗಳನ್ನು ಕೇಂದ್ರ ಸರಕಾರ ರದ್ದುಪಡಿಸಿತ್ತು. ಆದರೆ ಅಂತಿಮ ವರ್ಷದ ಪರೀಕ್ಷೆಯನ್ನು ಮಾಡುವುದಾಗಿ ಹೇಳಿತ್ತು. ಇದೀಗ ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸುವಂತೆ ಎಲ್ಲಾ ವಿಶ್ವವಿದ್ಯಾಲಯಗಳಿಗೆ ಸೂಚನೆಯನ್ನು ನೀಡಿದೆ.

ಆರೋಗ್ಯ ಇಲಾಖೆ ನೀಡಿರುವ ಗೈಡ್ ಲೈನ್ಸ್ ಗಳನ್ನು ಪಾಲನೆ ಮಾಡಿಕೊಂಡು ಆಫ್ ಲೈನ್ ಹಾಗೂ ಆನ್ ಲೈನ್ ಪರೀಕ್ಷೆಗಳನ್ನ ನಡೆಸಬಹುದು ಎಂದು ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸೂಚನೆಯನ್ನು ನೀಡಿದೆ.