SSLC ಪರೀಕ್ಷೆ : ಕುಂದಾಪುರದ ವಿದ್ಯಾರ್ಥಿನಿಗೆ ಕೊರೊನಾ ಸೋಂಕು

0

ಕುಂದಾಪುರ : ಎಸ್ಎಸ್ಎಲ್ ಸಿ ಪರೀಕ್ಷೆ ಬರೆದಿದ್ದ ಕುಂದಾಪುರದ ವಿದ್ಯಾರ್ಥಿನಿಯೋರ್ವಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸೋಮವಾರ ನಡೆದ ವಿಜ್ಞಾನ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಗೆ ಅನಾರೋಗ್ಯಕ್ಕೆ ತುತ್ತಾಗಿದ್ದಳು. ಆಕೆಯನ್ನು ಕೊರೊನಾ ತಪಾಸಣೆಗೆ ಒಳಪಡಿಸಿದಾಗ ಪಾಸಿಟಿವ್ ವರದಿ ಬಂದಿದ್ದು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಆತಂಕ ಶುರುವಾಗಿದೆ.

ಜೂನ್ 25ರಂದು ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭವಾಗುತ್ತಿದ್ದಂತೆಯೇ ವಿದ್ಯಾರ್ಥಿನಿ ಪರೀಕ್ಷೆ ಹಾಜರಾಗಿದ್ದಳು. ಎಂದಿನಂತೆಯೇ ಸೋಮವಾರ ಕೂಡ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಿದ್ದ ವಿದ್ಯಾರ್ಥಿನಿಯನ್ನು ಥರ್ಮಲ್ ಸ್ಕ್ರೀನಿಂಗ್ ಗೆ ಒಳಪಡಿಸಲಾಗಿದ್ದು, ಯಾವುದೇ ಲಕ್ಷಣಗಳು ಕಂಡು ಬಂದಿರಲಿಲ್ಲ. ಆದರೆ ವಿದ್ಯಾರ್ಥಿನಿ ವಿಜ್ಞಾನ ಪರೀಕ್ಷೆ ಬರೆಯಲು ಆರಂಭಿಸಿದ ಕೆಲ ಹೊತ್ತಿನಲ್ಲಿ ತಲೆನೋವು ಕಾಣಿಸಿಕೊಂಡಿದೆ. ಅಲ್ಲದೇ ವಿದ್ಯಾರ್ಥಿನಿ ಅನಾರೋಗ್ಯಕ್ಕೂ ತುತ್ತಾಗಿದ್ದಾಳೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿ ಪರೀಕ್ಷೆ ಬರೆಯಲು ವ್ಯವಸ್ಥೆ ಕಲ್ಪಿಸಲಾಗಿದೆ.

ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಪರೀಕ್ಷಾ ವರದಿಯಲ್ಲಿ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇದೀಗ ವಿದ್ಯಾರ್ಥಿನಿ ಪರೀಕ್ಷೆ ಬರೆದಿರುವ ಕೊಠಡಿಯನ್ನು ಸೀಲ್ ಡೌನ್ ಮಾಡಲಾಗುತ್ತದೆ. ಆದರೆ ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕ ಪಡಬೇಕಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿದ್ಯಾರ್ಥಿನಿಗೆ ಕೊರೊನಾ ಸೋಂಕು ಹರಡಿರುವ ಮೂಲವನ್ನು ಪತ್ತೆ ಹಚ್ಚಲಾಗುತ್ತಿದೆ. ಆದರೆ ವಿದ್ಯಾರ್ಥಿನಿಯ ಮನೆಗೆ ಇತ್ತೀಚಿಗಷ್ಟೆ ಕೆಲವರು ಮಹಾರಾಷ್ಟ್ರದಿಂದ ಕ್ವಾರಂಟೈನ್ ಮುಗಿಸಿ ಬಂದಿದ್ದರು ಎನ್ನಲಾಗುತ್ತಿದೆ. ವಿದ್ಯಾರ್ಥಿನಿಯ ಜೊತೆ ಸಂಪರ್ಕದಲ್ಲಿದ್ದವರ ಮಾಹಿತಿಯನ್ನು ಅಧಿಕಾರಿಗಳು ಸಂಗ್ರಹಿಸುತ್ತಿದ್ದಾರೆ.

Leave A Reply

Your email address will not be published.