ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯ ಸರಕಾರಿ ನೌಕರರಿಗೆ ರಾಜ್ಯ ಸರಕಾರ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಒಪ್ಪಿಗೆಯನ್ನು ನೀಡಿದೆ.

ಕಂಟೈನ್ಮೆಂಟ್ ಝೋನ್ ಗಳಲ್ಲಿ ವಾಸಿಸುವವರಿಗೆ ಕಚೇರಿಗೆ ಬರಲು ಸಾಧ್ಯವಾಗದರು ಹಾಗೂ ಕೊರೊನಾ ಸೋಂಕಿಗೆ ಒಳಗಾಗಿ ಕ್ವಾರಂಟೈನ್ ಗೆ ಒಳಪಟ್ಟಿರುವ ರಾಜ್ಯ ಸರಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ನೀಡಲು ಸರಕಾರದ ಒಪ್ಪಿಗೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸಿವಿಲ್ ಸೇವೆಗಳ ನಿಯಮಾವಳಿಗಳಿಗೆ ತಿದ್ದುಪಡಿ ಮಾಡಿದೆ.

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ರಾಜ್ಯ ಸರಕಾರಕ್ಕೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡುವಂತೆ ಮನವಿಯನ್ನು ಮಾಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕಚೇರಿಗೆ ಬರಲು ಅಸಾಧ್ಯವಾಗುವ ಸರಕಾರಿ ನೌಕರರಿಗೆ 7 ದಿನ ಹಾಗೂ ಸೋಂಕಿಗೆ ಒಳಗಾಗಿ ಕ್ವಾರಂಟೈನ್ ಗೆ ಒಳಗಾಗುವವರಿಗೆ 14 ದಿನಗಳ ಕಾಲ ಸಾಂದರ್ಭಿಕ ರಜೆಯನ್ನು ನೀಡಬಹುದಾಗಿದೆ.


