ಮಂಗಳೂರು : ಕೊರೊನಾ ವೈರಸ್ ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಮಂಗಳೂರು ವಿಶ್ವವಿದ್ಯಾಲಯದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಅವರು ಆದೇಶ ಹೊರಡಿಸಿದ್ದಾರೆ.
ಮಂಗಳೂರು ವಿವಿ ಪರೀಕ್ಷೆಗೆ ಕೇರಳ ರಾಜ್ಯದಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ವಿದ್ಯಾರ್ಥಿಗಳ ನಿರಂತರ ಓಡಾಟದಿಂದ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಪರೀಕ್ಷೆಯನ್ನೇ ರದ್ದು ಮಾಡಿ ಆದೇಶಿಸಿದ್ದಾರೆ.
ಸದ್ಯ ತಾತ್ಕಾಲಿಕವಾಗಿ ಪರೀಕ್ಷೆಯನ್ನು ರದ್ದು ಮಾಡಲಾಗಿದ್ದು, ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದ ನಂತರದಲ್ಲಿ ಹೊಸದಾಗಿ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆಯಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತಿರುವ ಹಿನ್ನೆಲೆಯಲ್ಲಿ ಜಿಲ್ಲೆಗೆ ಆಗಮಿಸುವ ಕೇರಳ ಹಾಗೂ ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗುತ್ತದೆ ಎಂದು ಆದೇಶದಲ್ಲಿ ಹೇಳಲಾಗಿದೆ.