1 ರಿಂದ 9ನೇ ತರಗತಿ ಎಲ್ಲಾ ವಿದ್ಯಾರ್ಥಿಗಳು ಪಾಸ್ ..!! ನಾಳೆಯೇ ಸರಕಾರದ ನಿರ್ಧಾರ : ಸಚಿವ ಕೆ.ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ 2ನೇ ಅಲೆ ಆತಂಕವನ್ನು ತಂದೊಡ್ಡಿದೆ. ಈ ಹಿನ್ನೆಲೆಯಲ್ಲಿ 1 ರಿಂದ 9ನೇ ತರಗತಿ ವರೆಗಿನ ಎಲ್ಲಾ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡುವಂತೆ ಸರಕಾರ ಸೂಚನೆಯನ್ನು ನೀಡಿದೆ. ಪರೀಕ್ಷೆ ಇಲ್ಲದೇ ತೇರ್ಗಡೆ ಮಾಡಬೇಕೆ ಎನ್ನವುದು ಗೊತ್ತಿಲ್ಲ. ಈ ಕುರಿತು ಶಿಕ್ಷಣ ಸಚಿವರ ಜೊತೆ ಮಾತನಾಡುತ್ತೇನೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸೋಮವಾರ ಸಭೆ ನಡೆಸುತ್ತೇವೆ. ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನ ಪರೀಕ್ಷೆ ಇಲ್ಲದೇ ಪಾಸ್ ಮಾಡಬೇಕೆ ಎನ್ನುವುದರ ಬಗ್ಗೆ ಚರ್ಚಿಸುತ್ತೇನೆ. ಗೃಹ ಸಚಿವರು, ಕಂದಾಯ ಸಚಿವರು ಹಾಗು ಶಿಕ್ಷಣ ಸಚಿವರ ಜೊತೆಗೂ ಚರ್ಚೆ ಮಾಡುತ್ತೇವೆ. ಕಳೆದ ನಾಲ್ಕು ವಾರಗಳಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಳವಾಗಿದೆ. ತೆಗೆದುಕೊಂಡಿರುವ ಕ್ರಮ ಸಾಕಾಗುತ್ತಿಲ್ಲ. ಗಡಿ ಭಾಗಗಳಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಬೆಂಗಳೂರಿಗೆ ಬರುವವರ ಬಗ್ಗೆ ನಿಗಾ ಇಡಬೇಕು ಎಂದು ಅವರು ಹೇಳಿದ್ದಾರೆ.

https://kannada.newsnext.live/school-timings-change-teachers-demand-education-minister/

ನಾಗ್ಪುರ, ಮಹಾರಾಷ್ಟ್ರದಲ್ಲಿ ಲಾಕ್ ಡೌನ್ ಮಾಡಿರುವುದನ್ನು ನಾವು ಕಂಡಿದ್ದೇನೆ. ಈ ಎಲ್ಲಾ ವಿಚಾರಗಳ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸುತ್ತೇನೆ. ಮುಂದಿನ 7 ರಿಂದ 8 ವಾರಗಳ ಕಾಲ ಅಗತ್ಯಕ್ರಮ ತೆಗೆದುಕೊಳ್ಳುವಂತೆ ತಾಂತ್ರಿಕ ಸಲಹಾ ಸಮಿತಿಯಿಂದ ವರದಿ ಬಂದಿದೆ. ರಾಜ್ಯಕ್ತೀವ್ರತೆ ಇರುವ ವೈರಾಣು ಬಂದಿಲ್ಲ. ಆದರೆ ತೀವ್ರವಾಗಿ ಹರಡುವ ವೈರಾಣು ಬಂದಿದೆ ಎಂದಿದ್ದಾರೆ.

https://kannada.newsnext.live/increasing-heat-on-the-other-hand-corona-panic-teachers-students-from-mask/

Comments are closed.