ಮುಂಬೈ : ಕೊರೊನಾ ವೈರಸ್ ಸೋಂಕಿನ 2ನೇ ಅಲೆಯ ಅಬ್ಬರ ಹೆಚ್ಚುತ್ತಿದೆ. ಕೊರೊನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕೈಗೊಂಡಿರುವ ಮಹಾರಾಷ್ಟ್ರ ಸರಕಾರ, ಇದೀಗ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟಿದೆ.

ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 1 ರಿಂದ 8 ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳನ್ನು ಉತ್ತೀರ್ಣ ಮಾಡುವುದಾಗಿ ಏಪ್ರಿಲ್ 3 ರಂದು ರಾಜ್ಯ ಸರ್ಕಾರ ಆದೇಶಿಸಿತ್ತು.

ಇದೀಗ 9 ಮತ್ತು 11 ನೇ ತರಗತಿಗಳಿಗೆ ಪರೀಕ್ಷೆ ಇಲ್ಲದೆ ಪಾಸ್ ಮಾಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. ಇನ್ನು 10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳಿಗೆ ಆಫ್ ಲೈನ್ ನಲ್ಲೇ ಪರೀಕ್ಷೆ ನಡೆಸಲಾಗು ವುದು. ಶೀಘ್ರದಲ್ಲಿಯೇ ದಿನಾಂಕ ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ವರ್ಷಾ ಗಾಯಕ್ವಾಡ್ ತಿಳಿಸಿದ್ದಾರೆ.

ಮಹಾರಾಷ್ಟ್ರ ಮಾದರಿಯಲ್ಲಿಯೇ ರಾಜ್ಯದಲ್ಲೂ 11ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಪರೀಕ್ಷೆ ಯಿಲ್ಲದೇ ಉತ್ತೀರ್ಣಗೊಳಿಸುವ ನಿರ್ಧಾರವನ್ನು ಶಿಕ್ಷಣ ಇಲಾಖೆ ಕೈಗೊಳ್ಳುತ್ತಾ ಎಂದು ಕಾದುನೋಡವೇಕಾಗಿದೆ.
`