ಬೆಂಗಳೂರು : ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಶವಿವಾರ ಸರಕಾರಿ ಕಚೇರಿಗಳಿಗೆ ರಜೆ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಇನ್ಮುಂದೆ ಪ್ರತೀ ಶನಿವಾರದಂದು ಶಾಲೆಗೆ ರಜೆಯನ್ನು ಘೋಷಿಸಲಾಗಿದೆ.

ಕೊರೊನಾ ವೈರಸ್ ಸೋಂಕಿನ ಮುನ್ನೆಚ್ಚರಿಕೆಯ ಕ್ರಮವಾಗಿ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿಯಲ್ಲಿ ಹೊರಡಿಸಲಾಗಿರುವ ಆದೇಶದಂತೆ ಜುಲೈ 8 ರಿಂದ ಜಾರಿಗೆ ಬರುವಂತೆ ಅಗಸ್ಟ್ 10ರ ವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ, ಕಚೇರಿಗಳಿಗೆ ಎರಡನೇ ಶನಿವಾರ ಹಾಗೂ ನಾಲ್ಕನೇ ಶನಿವಾರವೂ ಸೇರಿಕೊಂಡಂತೆ ರಜೆಯನ್ನು ಘೋಷಿಸಲಾಗಿದೆ.

ಆದರೆ ಈಗಾಗಲೇ ಕೋವಿಡ್ -19 ಕಾರ್ಯಕ್ಕೆ ನಿಯೋಜನೆಗೊಂಡಿರುವ ಶಿಕ್ಷಕರಿಗೆ, ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ಹಾಗೂ ಎಸ್ಎಸ್ಎಲ್ ಸಿ ಮೌಲ್ಯಮಾಪನ ಕಾರ್ಯಕ್ಕೆ ನಿಯೋಜಿತರಾಗಿರುವ ಶಿಕ್ಷಕರು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಅನ್ವಯವಾಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.