ಹೊಸದಿಲ್ಲಿ : ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾನವ ಸಂಪದಭಿವೃದ್ಧಿ ಸಚಿವಾಲಯವು ವೈದ್ಯಕೀಯ ಕಾಲೇಜು ಪ್ರವೇಶದ ನೀಟ್ (NEET)ಮತ್ತು ಎಂಜಿನಿಯರಿಂಗ್ ಪ್ರವೇಶಕ್ಕಾಗಿ ಇರುವ ಜೆಇಇ (JEE)ಪರೀಕ್ಷೆಗಳನ್ನು ಸೆಪ್ಟಂಬರ್‌ಗೆ ಮುಂದೂಡಿಕೆ ಮಾಡಲಾಗಿದೆ.

ವಿದ್ಯಾರ್ಥಿಗಳ ಸುರಕ್ಷಿತೆಯ ದೃಷ್ಟಿಯಿಂದ ನೀಟ್ ಪರೀಕ್ಷೆ ಸೆ.13 ಹಾಗೂ ಜೆಇಇ ಮುಖ್ಯ ಪರೀಕ್ಷೆ ಸೆ.1 ರಿಂದ 6 ರ ನಡುವೆ ನಡೆಯಲಿದೆ. ಇನ್ನು ಜೆಇಇ ಅಡ್ವಾನ್ಸ್ ಪರೀಕ್ಷೆ ಸೆಪ್ಟಂಬರ್ 27ರಂದು ನಡೆಯಲಿದೆ ಎಂದು ಮಾನವ ಸಂಪದಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ತಿಳಿಸಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ಶೈಕ್ಷಣಿಕ ವರ್ಷ ತಡವಾಗಿ ಆರಂಭವಾಗುತ್ತಿರುವುದರಿಂದ ಐಸಿಎಸ್‌ಇ ತನ್ನ ಪಠ್ಯಕ್ರಮವನ್ನು ಶೇ.25 ಕಡಿಮೆ ಮಾಡಲು ನಿರ್ಧರಿಸಿದೆ. ಇದು 2020-21ನೇ ಶೈಕ್ಷಣಿಕ ವರ್ಷದಲ್ಲಿ ಜಾರಿಯಲ್ಲಿ ಇರಲಿದೆ.