ಶಿವಮೊಗ್ಗ : ಕೊರೊನಾ ಹೆಮ್ಮಾರಿಯ ಆರ್ಭಟ ಹೆಚ್ಚುತ್ತಿದ್ದು, ಶಿವಮೊಗ್ಗದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಕೊರೊನಾ ಮಹಾಮಾರಿ ಬಲಿ ಪಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ಮೂಲದ ಶಿಕ್ಷಕರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಶಿಕ್ಷಕರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಿಕ್ಷಕರ ಗಂಟಲು ದ್ರವದ ಪರೀಕ್ಷೆ ನಡೆಸಿದಾಗ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಶಿಕ್ಷಕರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತೀವ್ರ ಉಸಿರಾಟ ಸಮಸ್ಯೆಯ ಹಿನ್ನೆಲೆಯಲ್ಲಿ ಕಳೆದ 4 ದಿನಗಳಿಂದಲೂ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸೋಂಕಿತ ಶಿಕ್ಷಕ ಸಾವನ್ನಪ್ಪಿದ್ದಾರೆ.

ಮೃತ ಶಿಕ್ಷಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷರಾಗಿದ್ದರು ಎಂದು ತಿಳಿದುಬಂದಿದೆ. ಕೊರೊನಾ ಮಹಾಮಾರಿ ಶಿಕ್ಷಕರೋರ್ವರನ್ನು ಬಲಿ ಪಡೆದ ಬೆನ್ನಲ್ಲೇ ಇದೀಗ ಶಿಕ್ಷಕ ಸಮುದಾಯಕ್ಕೆ ಆತಂಕ ಎದುರಾಗಿದೆ.