ಶಾಲಾರಂಭದ 2ನೇ ದಿನಕ್ಕೆ 18 ಶಿಕ್ಷಕರಿಗೆ ಕೊರೊನಾ ಸೋಂಕು : ಟೆಸ್ಟ್ ರಿಪೋರ್ಟ್ ಸಿಗದೆ ಆತಂಕದಲ್ಲಿ ಪೋಷಕರು, ಶಿಕ್ಷಕರು ..!

ಬೆಂಗಳೂರು : ರಾಜ್ಯದಲ್ಲಿ ಶಾಲಾರಂಭದ ಬೆನ್ನಲ್ಲೇ ಕೊರೊನಾ ವೈರಸ್ ಸೋಂಕು ಶಾಕ್ ಕೊಟ್ಟಿದೆ. ಶಾಲಾರಂಭವಾದ 2 ದಿನಕ್ಕೆ ರಾಜ್ಯದಲ್ಲಿ ಬರೋಬ್ಬರಿ 18 ಮಂದಿಗೆ ಶಿಕ್ಷಕರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಜನವರಿ 1ರಿಂದ ರಾಜ್ಯದಾದ್ಯಂತ ಎಸ್ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳನ್ನು ಶಿಕ್ಷಣ ಇಲಾಖೆ ಪುನರಾರಂಭ ಗೊಂಡಿತ್ತು. ಶಾಲಾರಂಭದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಿಕ್ಷಕರನ್ನು ಕೊರೊನಾ ತಪಾಸಣೆಗೆ ಒಳಪಡಿಸಲಾಗಿತ್ತು. ಗದಗ, ಹಾಸನ, ತುಮಕೂರು, ಉಡುಪಿ, ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಒಟ್ಟು 18 ಮಂದಿಗೆ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ.

ಕೊರೊನಾ ಸೋಂಕಿತ ಶಿಕ್ಷಕರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ಗದಗ ಜಿಲ್ಲೆಯಲ್ಲಿ ಮಕ್ಕಳಿಗೆ ಶಾಲೆಗೆ ರಜೆ ನೀಡಲಾಗಿದ್ರೆ, ಕೆಲವು ಕಡೆಗಳಲ್ಲಿ ಸ್ಯಾನಿಟೈಸ್ ಮಾಡಿ ಶಾಲಾರಂಭ ಮಾಡಲು ಶಿಕ್ಷಣ ಇಲಾಖೆ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದೆ. ಶಿಕ್ಷಕರಿಗೆ ಕೊರೊನಾ ಸೋಂಕು ದೃಢಪಡುತ್ತಿದ್ದಂತೆಯೇ ವಿದ್ಯಾರ್ಥಿಗಳಿಗೆ ಶಾಕ್ ಎದುರಾಗಿದೆ. ಶಿಕ್ಷಕರ ಜೊತೆಗೆ ಸಂಪರ್ಕದಲ್ಲಿದ್ದ ವಿದ್ಯಾರ್ಥಿಗಳಿಗೆ ಆತಂಕ ಶುರುವಾಗಿದೆ.

ಇನ್ನು ಶಾಲಾರಂಭಕ್ಕೆ 72 ಗಂಟೆಗಳ ಮುನ್ನವೇ ಶಿಕ್ಷಕರು ಕಡ್ಡಾಯವಾಗಿ ಕೊರೊನಾ ತಪಾಸಣೆ ಮಾಡಬೇಕೆಂದು ಶಿಕ್ಷಣ ಇಲಾಖೆ ಆದೇಶಿಸಿದೆ. ಆದರೆ ಶಿಕ್ಷಕರು ಕೊರೊನಾ ತಪಾಸಣೆಗೆ ಒಳಪಟ್ಟಿದ್ದರೂ ಕೂಡ ಇನ್ನೂ ಬಹುತೇಕ ಶಿಕ್ಷಕರ ಕೊರೊನಾ ವರದಿ ಕೈ ಸೇರಿಲ್ಲ. ಪರೀಕ್ಷೆಗಾಗಿ ಗಂಟಲು ದ್ರವ ನೀಡಿದ್ದರೂ ಕೂಡ ಶಿಕ್ಷಕರು ತರಗತಿಗಳಿಗೆ ಹಾಜರಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ಕೊರೊನಾ ಸೋಂಕಿತ ಶಿಕ್ಷಕರ ಸಂಖ್ಯೆಯಲ್ಲಿಯೂ ಏರಿಕೆಯಾಗುವ ಆತಂಕ ಎದುರಾಗಿದೆ.

Comments are closed.