CUET PG 2026: ವಿದ್ಯಾರ್ಥಿಗಳೇ ಗಮನಿಸಿ, CUET PG 2026ರ ಅರ್ಜಿ ತಿದ್ದುಪಡಿ ಪ್ರಕ್ರಿಯೆ ಆರಂಭ; ಜನವರಿ 30 ಕೊನೆಯ ದಿನ

CUET PG 2026 Application Correction Window: ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA), ಸ್ನಾತಕೋತ್ತರ ಪದವಿ ಪ್ರವೇಶ ಪರೀಕ್ಷೆಯಾದ ‘CUET PG 2026’ರ ಅರ್ಜಿ ತಿದ್ದುಪಡಿ ಪ್ರಕ್ರಿಯೆಯನ್ನು ಆರಂಭಿಸಿದೆ. ಅರ್ಜಿಯಲ್ಲಿ ತಪ್ಪುಗಳಿದ್ದಲ್ಲಿ ಸರಿಪಡಿಸಲು ಅಭ್ಯರ್ಥಿಗಳಿಗೆ ಇದು ಕೊನೆಯ ಅವಕಾಶವಾಗಿದೆ.

ಅರ್ಜಿ ಸಲ್ಲಿಸುವಾಗ ತಪ್ಪು ಮಾಡಿರುವ ಅಭ್ಯರ್ಥಿಗಳು ಜನವರಿ 28ರಿಂದ ಜನವರಿ 30ರ ರಾತ್ರಿ 11:50ರವರೆಗೆ ತಿದ್ದುಪಡಿ ಮಾಡಲು ಕಾಲಾವಕಾಶ ನೀಡಲಾಗಿದೆ. ಈ ಅವಧಿಯ ನಂತರ ಯಾವುದೇ ಬದಲಾವಣೆಗಳಿಗೆ ಅವಕಾಶವಿರುವುದಿಲ್ಲ.

ಕಳೆದ ಡಿಸೆಂಬರ್ 19, 2025ರ ಒಳಗೆ ಅರ್ಜಿ ಸಲ್ಲಿಸಿದವರಿಗೆ ಮಾತ್ರ ಈ ಸೌಲಭ್ಯ ಸಿಗಲಿದೆ. ಅಭ್ಯರ್ಥಿಗಳು ತಮ್ಮ ವೈಯಕ್ತಿಕ ವಿವರಗಳು ಮತ್ತು ಪರೀಕ್ಷಾ ಕೇಂದ್ರದ ಆದ್ಯತೆಗಳನ್ನು ಅಧಿಕೃತ ವೆಬ್‌ಸೈಟ್ ಮೂಲಕ ಬದಲಾಯಿಸಿಕೊಳ್ಳಬಹುದು.

ಒಂದು ವೇಳೆ ತಿದ್ದುಪಡಿಯ ನಂತರ ಅರ್ಜಿ ಶುಲ್ಕದಲ್ಲಿ ವ್ಯತ್ಯಾಸ ಕಂಡುಬಂದಲ್ಲಿ, ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಹೆಚ್ಚುವರಿ ಹಣವನ್ನು ಪಾವತಿಸಬೇಕಾಗುತ್ತದೆ. ಶುಲ್ಕ ಪಾವತಿಯಾದ ನಂತರವಷ್ಟೇ ತಿದ್ದುಪಡಿಗಳು ಮಾನ್ಯವಾಗುತ್ತವೆ.

ಜಾರಿಯಾಗದ ಕಾನೂನಿನಡಿ ಹಿಂದೂ ಕಾರ್ಯಕರ್ತರಿಗೆ ನೋಟಿಸ್: ಸರ್ಕಾರದ ವಿರುದ್ಧ ಸುನಿಲ್ ಕುಮಾರ್ ಕಿಡಿ

ಪರೀಕ್ಷೆಯು ಮಾರ್ಚ್ 2026ರಲ್ಲಿ ನಡೆಯಲಿದ್ದು, ಸಂಪೂರ್ಣವಾಗಿ ಕಂಪ್ಯೂಟರ್ ಆಧಾರಿತವಾಗಿರುತ್ತದೆ (CBT). ಪ್ರತಿ ಪತ್ರಿಕೆಯು 75 ಬಹು ಆಯ್ಕೆಯ ಪ್ರಶ್ನೆಗಳನ್ನು (MCQs) ಹೊಂದಿದ್ದು, ಒಟ್ಟು 90 ನಿಮಿಷಗಳ ಕಾಲಾವಕಾಶ ನೀಡಲಾಗುತ್ತದೆ.

ಅಂಕಗಳ ವಿಚಾರಕ್ಕೆ ಬಂದರೆ, ಪ್ರತಿ ಸರಿ ಉತ್ತರಕ್ಕೆ 4 ಅಂಕಗಳು ಸಿಗಲಿವೆ. ಆದರೆ ತಪ್ಪು ಉತ್ತರ ನೀಡಿದರೆ 1 ಅಂಕವನ್ನು ಕಳೆಯಲಾಗುತ್ತದೆ (ನೆಗೆಟಿವ್ ಮಾರ್ಕಿಂಗ್). ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು exams.nta.nic.in/cuet-pg ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

Vidhya | ವಿದ್ಯಾಶ್ರೀ

ವಿದ್ಯಾಶ್ರೀ ಅವರು ನ್ಯೂಸ್‌ ನೆಕ್ಸ್ಟ್‌ ಕನ್ನಡ ( Kannada News Next) ದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಕನ್ನಡದ ನ್ಯೂಸ್‌ ಚಾನೆಲ್‌, ದಿನ ಪತ್ರಿಕೆ ಹಾಗೂ ಡಿಜಿಟಲ್‌ ಮಾಧ್ಯಮದಲ್ಲಿ ಹಲವು ವರ್ಷಗಳ ಕಾಲ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.