ಚಿಕ್ಕಬಳ್ಳಾಪುರ : ಮಾಂಡೌಸ್ ಚಂಡಮಾರುತ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಅದ್ರಲ್ಲೂ ವಿಪರೀತ ಚಳಿಯ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲೆಯಾದ್ಯಂತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ (Cyclone Mandous Storm School Holiday) ಮಾಡಿದೆ.
ಮಾಂಡೌಸ್ ಚಂಡಮಾರುತದ ಎಫೆಕ್ಟ್ ರಾಜ್ಯಕ್ಕೆ ತಟ್ಟಿದೆ. ನಾಳೆಯೂ ಮಳೆ ಮುಂದುವರಿಕೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಮಾತ್ರವೇ ರಜೆಯನ್ನು ಘೋಷಣೆ ಮಾಡಲಾಗಿದೆ. ಆದರೆ ಪಿಯುಸಿ, ಪದವಿ, ಸ್ನಾತಕೋತ್ತರ ತರಗತಿಗಳು ಎಂದಿನಂತೆ ನಡೆಯಲಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಅವರು ಮಾಹಿತಿ ನೀಡಿದ್ದಾರೆ.
ಕರ್ನಾಟಕದಲ್ಲಿ ಮಳೆ ಮುಂದುವರಿಕೆ : 10ಕ್ಕೂ ಅಧಿಕ ಜಿಲ್ಲೆಗಳಲ್ಲಿ ಹಳದಿ ಅಲರ್ಟ್
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಮಾಂಡೌಸ್ ಚಂಡಮಾರುತದ ಎಫೆಕ್ಟ್ ಇದೀಗ ಕರ್ನಾಟಕಕ್ಕೂ ತಟ್ಟಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ದೇಶದ ಹಲವು ರಾಜ್ಯಗಳಲ್ಲಿ ಮಳೆಯ ಆರ್ಭಟ ಜೋರಾಗಿರಲಿದ್ದು, ಡಿ. 13ರವರೆಗೂ ಮಳೆಯ ಆರ್ಭಟ ಮುಂದುವರಿಯಲಿದೆ. ಇಂದು ರಾಜ್ಯದ 10ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ’ಹಳದಿ ಅಲರ್ಟ್’ ಘೊಷಿಸಲಾಗಿದೆ. ಮ್ಯಾಂಡಸ್ ಚಂಡಮಾರುತದ ಹಿನ್ನಲೆಯಲ್ಲಿ ತಮಿಳುನಾಡು, ಪುದುಚೇರಿ ಹಾಗೂ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಪರಿಣಾಮ ಕರ್ನಾಟಕದ ಬೆಂಗಳೂರು, ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಮಳೆಯಾಗುತ್ತಿದೆ.
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದಿನಿಂದ 3 ದಿನ ಮಳೆಯಾಗುವ ಸಾಧ್ಯತೆಯಿದ್ದು, ಇಂದು ಬೆಂಗಳೂರಿನಲ್ಲಿ ಭಾರೀ ಮಳೆಯಾಲಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮ್ಯಾಂಡಸ್ ಚಂಡಮಾರುತದ ಪ್ರಭಾವ ಹೆಚ್ಚಾಗಿರುವ ಕಾರಣ ಡಿ. 12ರವೆರೆಗೂ ಮಲೆನಾಡು, ಕರಾವಳಿಯಲ್ಲಿ ಗುಡುಗು ಸಹಿತ ಧಾರಾಕಾರವಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ಶಿವಮೊಗ್ಗ, ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ವ್ಯಾಪಕ ಮಳೆಯಾಗಲಿದ್ದು, ಮ್ಯಾಂಡಸ್ ಚಂಡಮಾರುತದಿಂದಾಗಿ ಡಿ. 13ರವರೆಗೂ ರಾಜ್ಯದಲ್ಲಿ ಮಳೆ ಆರ್ಭಟಿಸಲಿದ್ದು, ಇಂದು ಕರ್ನಾಟಕದ 10ಕ್ಕೂ ಹೆಚ್ಚು ಜಿಲ್ಲೆಗಳಿಗೆ ‘ಹಳದಿ ಅಲರ್ಟ್’ ಘೊಷಿಸಲಾಗಿದೆ. ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೊಡಗು, ಚಿಕ್ಕಮಗಳೂರು, ಕೋಲಾರ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೂಡ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಭಾರೀ ಮಳೆಯಾಗಲಿದ್ದು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರದಲ್ಲಿ ಇಂದು ವ್ಯಾಪಕ ಮಳೆಯಾಗಲಿದೆ. ಡಿಸೆಂಬರ್ 12ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗಿನಲ್ಲಿ ಮಳೆ ಹೆಚ್ಚಾಗಲಿದ್ದು, ಡಿಸೆಂಬರ್ 13ರವರೆಗೂ ಭಾರೀ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮ್ಯಾಂಡಸ ಚಂಡಮಾರುತದ ಪ್ರಭಾವದಿಂದಾಗಿ ಮಳೆಯ ಜೊತೆಗೆ ಗಾಳಿಯೂ ಹೆಚ್ಚಾಗಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಈಗಾಗಲೇ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಇಂದು ಚಳಿಯ ಜೊತೆಗೆ ಮಳೆಯ ಪ್ರಮಾಣವು ಹೆಚ್ಚಾಗಲಿದ್ದು, ದಕ್ಷಿಣ ಮತ್ತು ಕರಾವಳಿ ಕರ್ನಾಟಕದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಇಂದು ಬೆಂಗಳೂರು, ಕೋಲಾರ, ಚಿಕ್ಕಮಗಳೂರು ಮತ್ತು ಮಲೆನಾಡು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದ್ದು, ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ತಮಿಳುನಾಡು, ಆಂಧ್ರಪ್ರದೇಶ, ಪುದುಚೇರಿಯಲ್ಲಿ ಮಳೆ ಮುಂದುವರೆಯಲಿದ್ದು, ದಕ್ಷಿಣ ಪೆನಿನ್ಸುಲಾದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮಹಾರಾಷ್ಟ್ರ, ಛತ್ತೀಸ್‌ಗಢ, ಒಡಿಶಾ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕೂಡ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಮತ್ತು ಮಧ್ಯ ಭಾರತದ ಕೆಲವು ಪ್ರದೇಶಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಬೀಳುವ ಸಾಧ್ಯತೆಯಿದೆ.
ಇದನ್ನೂ ಓದಿ : Student rape: ಸರ್ಕಾರಿ ಕಾಲೇಜಿನ ಪ್ರಾಂಶುಪಾಲರಿಂದ ಹೀನಾಯ ಕೃತ್ಯ; ಅಮಲು ಪದಾರ್ಥ ನೀಡಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ
ಇದನ್ನೂ ಓದಿ : Harassment: ಊಟದಲ್ಲಿ ಕೂದಲು ಸಿಕ್ಕಿದ್ದಕ್ಕೆ ಪತ್ನಿಯ ತಲೆ ಬೋಳಿಸಿದ ಸೈಕೋ ಪತಿ; ಅತ್ತೆ-ಮಾವ ಕೂಡಾ ಸಾಥ್..!
Cyclone Mandous Storm School Holiday Declared in Chikkaballapur Karnataka