ಅಕ್ಟೋಬರ್‌ 18ರ ವರೆಗೆ ಶಾಲೆಗಳಿಗೆ ದಸರಾ ರಜೆ : ಸಿಎಂ ಸಿದ್ದರಾಮಯ್ಯ ಘೋಷಣೆ

Dasara Holiday Extend : ಬೆಂಗಳೂರು : ಕರ್ನಾಟಕದಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಕಾರ್ಯ ನಡೆಯುತ್ತಿದ್ದು, ಸಮೀಕ್ಷೆ ಕಾರ್ಯ ಮುಕ್ತಾಯವಾಗದ ಹಿನ್ನೆಲೆಯಲ್ಲಿ ಅಕ್ಟೋಬರ್‌ 18ರ ವರೆಗೆ ಶಾಲೆಗಳಿಗೆ ರಜೆ ವಿಸ್ತರಣೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಜಾತಿಗಣತಿಯ ಕುರಿತು ಚರ್ಚೆ ನಡೆಸಲಾಯ್ತು. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು, ಸದಸ್ಯರು ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು.

ಜಾತಿಗಣತಿಯ ಸರ್ವೆ ಕಾರ್ಯಕ್ಕೆ ಶಿಕ್ಷಕರು ನಿಯೋಜನೆ ಮಾಡಲಾಗಿದೆ. ಸರ್ವೆ ಕಾರ್ಯ ಈಗಾಗಲೇ ಮುಕ್ತಾಯವಾಗದ ಹಿನ್ನೆಲೆಯಲ್ಲಿ ರಾಜ್ಯಗಳಿಗೆ ಶಾಲಾ ರಜೆಯನ್ನು ಅಕ್ಟೋಬರ್‌ 18ರ ವರೆಗೆ ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ.

ಕರ್ನಾಟಕ ಶಿಕ್ಷಣ ಇಲಾಖೆ ನಿನ್ನೆಯಷ್ಟೇ ಶಾಲಾ ಅವಧಿಯನ್ನು ಬದಲಾಯಿಸಿ ಆದೇಶ ಹೊರಡಿಸಿತ್ತು. ಅಕ್ಟೋಬರ್‌ 8ರಿಂದ ಬೆಳಗ್ಗೆ 8 ಗಂಟೆಗೆ ಶಾಲೆಗಳನ್ನು ಆರಂಭಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದರು.

ಬೆಳಗ್ಗೆ 8 ಗಂಟೆಯಿಂದ ಆರಂಭಗೊಂಡ ಶಾಲೆಗಳು ಮಧ್ಯಾಹ್ನ 1 ಗಂಟೆಯ ವರೆಗೆ ನಡೆಯಲಿದೆ. ಅಲ್ಲದೇ ಮಧ್ಯಾಹ್ನದ ಅವಧಿಯಲ್ಲಿ ಸಮೀಕ್ಷೆ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ಸೂಚಿಸಲಾಗಿತ್ತು.

ಇದನ್ನೂ ಓದಿ : ಜಾತಿ ಗಣತಿ ಮಂದೂಡಿಕೆ, ಯುಎಚ್‌ಐಡಿ ಸಿಗದೆ ಶಿಕ್ಷಕರ ಪರದಾಟ

ಶಿಕ್ಷಣ ಇಲಾಖೆಯ ಆದೇಶಕ್ಕೆ ಶಿಕ್ಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಸಿಎಂ ಅಧಿಕಾರಿಗಳ ಸಭೆ ನಡೆಸಿದ್ದು, ದಸರಾ ರಜೆಯನ್ನು (Dasara Holiday Extend) ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಸೆಪ್ಟೆಂಬರ್‌ 22 ರಿಂದ ಅಕ್ಟೋಬರ್‌ 7ರ ವರೆಗೆ ಸರ್ವೆ ಕಾರ್ಯವನ್ನು ನಡೆಸುವುದಾಗಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ತಿಳಿಸಿತ್ತು. ಆದರೆ ಸಮೀಕ್ಷೆ ಕಾರ್ಯ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಸಮೀಕ್ಷೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

ಕರ್ನಾಟಕದ ಕರಾವಳಿ, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜನಗಣತಿಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಜನರು ತಮ್ಮ ಮಾಹಿತಿಯನ್ನು ಹಂಚಿಕೊಳ್ಳುವುದಕ್ಕೆ ಹಿಂದೇಟು ಹಾಕಿದ್ದರು. ಅದ್ರಲ್ಲೂ ಜಾತಿಗಣತಿ ವಿಚಾರದಲ್ಲಿ ಹಲವು ಗೊಂದಲಗಳು ಏರ್ಪಟ್ಟಿತ್ತು.

ಇದನ್ನೂ ಓದಿ : ರೈಲ್ವೆಯಲ್ಲಿದೆ ಅತೀ ದೊಡ್ಡ ಅವಕಾಶ: 11813 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Dasara Holiday Extend for schools till October 18: CM Siddaramaiah announces

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories