ದಸರಾ ರಜೆ ರದ್ದು : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

0

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಹೆಚ್ಚುತ್ತಿದ್ದು, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಯನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸುವುದು ಹಾಗೂ ವಿದ್ಯಾಗಮ ಕಲಿಕಾ ಕಾರ್ಯಕ್ರಮವನ್ನು ಯಥವತ್ತಾಗಿ ಜಾರಿಗೆ ತರುವ ನಿಟ್ಟಿನಲ್ಲಿ ದಸರಾ ರಜೆಯನ್ನು ರದ್ದುಗೊಳಿಸಿ ಶಿಕ್ಷಣ ಇಲಾಖೆ ಆದೇಶಿಸಿದೆ.

2020-21ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ರಾಜ್ಯದ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಶೈಕ್ಷಣಿಕ ಮತ್ತು ರಜಾ ಅವಧಿಯನ್ನು ನಿಗದಿಗೊಳಿಸಿ ಈ ಹಿಂದೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿತ್ತು. ಅದರಂತೆ ಅಕ್ಟೋಬರ್ 3ರಿಂದ ಅಕ್ಟೋಬರ್ 26ರ ವರೆಗೆ ವಿದ್ಯಾರ್ಥಿಗಳಿಗೆ ದಸರಾ ರಜೆಯನ್ನು ನಿಗದಿ ಪಡಿಸಲಾಗಿತ್ತು.

ಆದ್ರೆ ರಾಜ್ಯದಲ್ಲಿ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷದ ಶೈಕ್ಷಣಿಕ ವರ್ಷ ಆರಂಭಗೊಂಡಿಲ್ಲ. ಈ ಹಿನ್ನೆಲೆಯಲ್ಲೀಗ ದಸರಾ ರಜೆಯ ಕುರಿತು ಹೊರಡಿಸಲಾಗಿರುವ ಆದೇಶವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ರದ್ದುಪಡಿಸಿದೆ.

ಅಲ್ಲದೇ ವಿದ್ಯಾಗಮ ಯೋಜನೆಯನ್ನು ಮುಂದಿನ ಆದೇಶದ ವರೆಗೂ ಮುಂದುವರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ ರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.