Degree College : ಪದವಿ, ಡಿಪ್ಲೊಮಾ ಪರೀಕ್ಷೆಗೆ ಡೆಡ್‌ಲೈನ್‌ : 2 ದಿನದಲ್ಲಿ ಪುನರಾರಂಭದ ನಿರ್ಧಾರ

ಬೆಂಗಳೂರು : ಬಾಕಿ ಉಳಿದಿರುವ ಪರೀಕ್ಷೆಗಳನ್ನು ನಡೆಸಲು ಡೆಡ್‌ಲೈನ್‌ ನೀಡುವುದರ ಜೊತೆಗೆ ಪದವಿ ಹಾಗೂ ಡಿಪ್ಲೊಮೊ ಕಾಲೇಜುಗಳನ್ನು ಆರಂಭಿಸುವ ಕುರಿತು ಇನ್ನೆರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಶೇ.75ರಷ್ಟು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ. ಉಳಿದ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯ ಪ್ರಗತಿಯಲ್ಲಿದೆ. ಅಲ್ಲದೇ ಸರಕಾರಿ ಹಾಗೂ ಅನುದಾನಿತ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯ ಪ್ರಗತಿಯಲ್ಲಿದೆ. ರಾಜ್ಯದಲ್ಲಿ ಕಾಲೇಜು ಆರಂಭಿಸುವ ಕುರಿತು ಎರಡು ದಿನದಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ.

ಇದನ್ನೂ ಓದಿ : ರಾಜ್ಯದಲ್ಲಿ ಕಾಲೇಜು ಆರಂಭಕ್ಕೆ ಗ್ರೀನ್‌ ಸಿಗ್ನಲ್‌ : ಸರಕಾರದ ಮಹತ್ವದ ಆದೇಶ

ವಿದ್ಯಾರ್ಥಿಗಳು ಕಾಲೇಜಿಗೆ ಕಡ್ಡಾಯವಾಗಿ ಹಾಜರಾಗ ಬೇಕು ಎನ್ನುವ ನಿಯಮವಿಲ್ಲ. ಲಸಿಕೆ ಪಡೆದವರು ಮಾತ್ರವೇ ಆಫ್‌ಲೈನ್‌ ತರಗತಿಗೆ ಹಾಜರಾಗಬಹುದು. ಉಳಿದವರು ಆನ್‌ಲೈನ್‌ ತರಗತಿಯ ಮೂಲಕ ಪಾಠ ಬೋಧನೆಯನ್ನು ಕೇಳಬಹುದಾಗಿದೆ. ಆದರೆ ಹಾಜರಾತಿಯನ್ನು ಕಡ್ಡಾಯಗೊಳಿಸಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ : PUC Result : ಜುಲೈ 20ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ

ಇನ್ನು ಪದವಿ ಹಾಗೂ ಡಿಪ್ಲೊಮೊ ಸೆಮಿಸ್ಟರ್‌ಗಳ ಬಾಕಿ ಉಳಿದಿರುವ ಪರೀಕ್ಷೆಗಳನ್ನು ಅಗಸ್ಟ್‌ ಮತ್ತು ಅಕ್ಟೋಬರ್‌ ತಿಂಗಳ ಒಳಗಾಗಿ ಮುಗಿಸಬೇಕು. ಅಲ್ಲದೇ ಪರೀಕ್ಷೆ ನಡೆಸುವಾಗ ಕೋವಿಡ್‌ ಮಾರ್ಗಸೂಚಿ ಯನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ದೈಹಿತ ಅಂತರ, ಮಾಸ್ಕ್‌ ಧರಿಸುವುದನ್ನು ಕಡ್ಡಾಯ ಗೊಳಿಸಲಾಗಿದೆ. ಕೊರೊನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಪದವಿ ಪರೀಕ್ಷೆಗಳು ನಡೆದಿರಲಿಲ್ಲ. ಆದ್ರೇ ಇದೀಗ ಪರೀಕ್ಷೆಗಳನ್ನು ನಡೆಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Comments are closed.