ಚುನಾವಣಾ ಕರ್ತವ್ಯಕ್ಕೆ ತೆರಳಿದ್ದ 135 ಶಿಕ್ಷಕರು ಕೊರೊನಾ ಗೆ ಬಲಿ

ಲಕ್ನೋ : ಕೊರೊನಾ ಎರಡನೆಯ ಅಲೆ ದೇಶವನ್ನೇ ತಲ್ಲಣಗೊಳಿಸಿದೆ. ಕೊರೊನಾ ಸೋಂಕಿನ‌ ನಡುವಲ್ಲೇ ಚುನಾವಣಾ ಕರ್ತವ್ಯಕ್ಕೆ ಹಾಜರಾಗಿದ್ದ 135 ಶಿಕ್ಷಕರು ಹೆಮ್ಮಾರಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಕೊರೊನಾ ಸೋಂಕಿನ ನಡುವಲ್ಲೇ ಉತ್ತರ ಪ್ರದೇಶದಲ್ಲಿ ಚುನಾವಣೆ ಯನ್ನು ನಡೆಸಲಾಗಿತ್ತು. ಚುನಾವಣೆಯ ಸಂದರ್ಭದಲ್ಲಿ ಕೋವಿಡ್ ನಿಯಮಗಳನ್ನು ಪಾಲನೆ ಮಾಡಲಾಗಿಲ್ಲ ಅನ್ನೋ ಆರೋಪ ಕೇಳಿಬಂದಿತ್ತು. ಇದೀಗ ನೂರಾರು ಶಿಕ್ಷಕರು ಸೋಂಕಿಗೆ ಬಲಿಯಾಗಿರು ವುದು ಶಿಕ್ಷಣ ಸಮುದಾಯದ ಆತಂಕಕ್ಕೆ ಕಾರಣವಾಗಿದೆ‌.

ಈ ಕುರಿತು ಅಲಹಾಬಾದ್ ಹೈಕೋರ್ಟ್ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಉತ್ತರ ಪ್ರದೇಶ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ. ಕೋವಿಡ್ ನಿಯಮ ಪಾಲಿಸದ ನಿಮ್ಮ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದು ಎಂದು ಪ್ರಶ್ನಿಸಿರುವ ನ್ಯಾಯಾಲ ಯ ಉತ್ತರ ನೀಡುವಂತೆ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ.

Comments are closed.