Mangalore : ಸಪ್ಟೆಂಬರ್‌ 15 ರ ವರೆಗೆ ಪದವಿ, ಸ್ನಾತಕೋತ್ತರ ತರಗತಿಗಳ ಆರಂಭವಿಲ್ಲ : ಡಿ.ಸಿ. ಡಾ.ರಾಜೇಂದ್ರ ಕೆ.ವಿ

ಮಂಗಳೂರು : ಕೊರೊನಾ ಸೋಂಕಿನ ಪ್ರಮಾಣ ಇಳಿಕೆ ಕಂಡಿಲ್ಲ. ಹೀಗಾಗಿ ಸಪ್ಟೆಂಬರ್‌ 15ರ ವರೆಗೆ ಪದವಿ ಹಾಗೂ ಸ್ನಾತಕೋತ್ತರ ತರಗತಿಗಳನ್ನು ಆರಂಭಿಸಬಾರದು. ವಿದ್ಯಾರ್ಥಿ ಗಳಿಗೆ ಭೌತಿಕ ತರಗತಿಗಳ ಬದಲು ಕೇವಲ ಆನ್‌ಲೈನ್‌ ಮೂಲಕವಷ್ಟೇ ತರಗತಿಗಳನ್ನು ನಡೆಸಬೇಕೆಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ.

ಕೊರೊನಾ ವೈರಸ್‌ ಸೋಂಕಿನ ನಡುವಲ್ಲೇ ಕಾಲೇಜುಗಳ ಆರಂಭಕ್ಕೆ ಸಂಬಂಧಿಸಿದಂತೆ ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆಗೆ ದ.ಕ ಜಿಲ್ಲಾಧಿಕಾರಿಗಳು ಸಭೆಯನ್ನು ನಡೆಸಿದ್ದಾರೆ. ಸದ್ಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದ್ಯ ಕೊರೊನಾ ಪಾಸಿಟಿವಿಟಿ ದರ ಶೇ.2.5 ರಷ್ಟಿದೆ. ಹೀಗಾಗಿ ಸಪ್ಟೆಂಬರ್‌ 15ರ ವರೆಗೆ ಕಾಲೇಜುಗಳನ್ನು ಆರಂಭಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಒಂದೊಮ್ಮೆ ಕೊರೊನಾ ಸೋಂಕಿನ ಪ್ರಮಾಣ ಇಳಿಕೆಯನ್ನು ಕಂಡಲ್ಲಿ. ಮತ್ತೊಮ್ಮೆ ಸಭೆಯನ್ನು ಕರೆದು ಸಂಬಂಧಪಟ್ಟ ಕಾಲೇಜು ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದಿದ್ದಾರೆ. ಅಲ್ಲದೇ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಪ್ರಾಕ್ಟಿಕಲ್‌ ತರಗತಿಗಳನ್ನು ವಿದ್ಯಾರ್ಥಿ ತಂಡಗಳನ್ನು ರಚಿಸಿ ಕೊರೊನಾ ಮಾರ್ಗಸೂಚಿಯ ಮೂಲಕವೇ ನಡೆಸಬೇಕೆಂದು ನಿರ್ದೇಶನ ನೀಡಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ಆನ್‌ಲೈನ್‌ ತರಗತಿಗಳನ್ನು ನಡೆಸಲಾಗುತ್ತಿದ್ದರೂ ಕೂಡ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನೆಟ್‌ವರ್ಕ್‌ ಸಮಸ್ಯೆ ಎದುರಾಗಿದೆ. ಹೀಗಾಗಿ ಪರ್ಯಾಯ ಮಾರ್ಗದ ಮೂಲಕ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಕಾರ್ಯವನ್ನು ಮಾಡಲಾಗುವುದು ಎಂದಿದ್ದಾರೆ.

ಕಾಲೇಜು ಶಿಕ್ಷಣ ಇಲಾಖೆಯ ಜೊತೆಗೆ ನಡೆದ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಪ್ರಜ್ಞಾ ಅಮ್ಮೆಂಬಳ, ಮಂಗಳೂರು ವಿವಿ ಕುಲಸಚಿವ ಕಿಶೋರ್ ಕೆ., ಕಾಲೇಜು ಶಿಕ್ಷಣ ಇಲಾಖೆಯ ವಿಶೇಷಾಧಿಖಾರಿ ಜಯಕರ ಭಂಡಾರಿ, ನಿಟ್ಟೆ ವಿವಿ ನೋಡ್‌ ಅಧಿಕಾರಿ ಡಾ.ದಾನೇಶ್‌ ಉಪಸ್ಥಿತರಿದ್ದರು.

ಇದನ್ನೂ ಓದಿ : SC- ST ವಿದ್ಯಾರ್ಥಿಗಳಿಗೆ ಭರ್ಜರಿ GOOD NEWS : ಉನ್ನತ ಶಿಕ್ಷಣಕ್ಕೆ ಧನಸಹಾಯ ಪಡೆಯಲು ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ : ವಿದ್ಯಾರ್ಥಿಗಳಿಗೆ ಇನ್ನು ಆನ್‌ಲೈನ್‌ ಪರೀಕ್ಷೆ : ಮಂಗಳೂರು ವಿವಿಯಿಂದ ಹೊಸ ಚಿಂತನೆ

Comments are closed.