teacher recruitment exam : ಪಿಎಸ್​ಐ ನೇಮಕಾತಿ ಅಕ್ರಮದ ಬಳಿಕ ರಾಜ್ಯ ಸರ್ಕಾರ ಅಲರ್ಟ್ : ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಇವುಗಳಿಗೆ ನಿರ್ಬಂಧ

ಬೆಂಗಳೂರು : teacher recruitment exam : ರಾಜ್ಯದಲ್ಲಿ 545 ಪಿಎಸ್​ಐ ಹುದ್ದೆಗಳಿಗೆ ನಡೆದ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮವು ರಾಜ್ಯ ಸರ್ಕಾರವನ್ನು ತಲೆತಗ್ಗಿಸುವಂತೆ ಮಾಡಿದೆ.ಈ ಪ್ರಕರಣದ ಬಳಿಕ ಸಖತ್​ ಅಲರ್ಟ್​ ಆಗಿರುವ ರಾಜ್ಯ ಸರ್ಕಾರ ಮುಂದೆ ನಡೆಯುವ ಯಾವುದೇ ಪರೀಕ್ಷೆಗಳಲ್ಲಿ ಅಕ್ರಮ ನಡೆಯದಂತೆ ಹದ್ದಿನ ಕಣ್ಣಿಡುತ್ತಿದೆ. ಮೇ 21ರಂದು ಹದಿನೈದು ಸಾವಿರ ಶಿಕ್ಷಕರ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಯಲ್ಲಿ ಯಾವುದೇ ಅಚಾತುರ್ಯ ಆಗದಂತೆ ಎಚ್ಚರವಹಿಸಿರುವ ರಾಜ್ಯ ಸರ್ಕಾರವು ಕೆಲವೊಂದು ವಸ್ತುಗಳನ್ನು ಪರೀಕ್ಷೆಗೆ ತರಬೇಡಿ ಎಂದು ಅಭ್ಯರ್ಥಿಗಳಿಗೆ ಕಟ್ಟು ನಿಟ್ಟಾಗಿ ನಿಯಮಗಳನ್ನು ಹೊರಡಿಸಿದೆ.


ಬೆಂಗಳೂರಿನಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್​ ಶಿಕ್ಷಣ ಇಲಾಖೆ ಹಾಗೂ ರಾಜ್ಯ ಪೊಲೀಸ್​ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಯಲ್ಲಿ ಸಭೆ ನಡೆಸಿ ಪರೀಕ್ಷೆಯಲ್ಲಿ ಯಾವೆಲ್ಲ ರೀತಿಯಲ್ಲಿ ಎಚ್ಚರಿಕೆ ವಹಿಸಬೇಕು ಎನ್ನುವುದರ ಬಗ್ಗೆ ಮಹತ್ವದ ಮಾಹಿತಿಯನ್ನು ನೀಡಿದರು. ಅಲ್ಲದೇ ಅಧಿಕಾರಿಗಳಿಂದ ಪರೀಕ್ಷೆಯಲ್ಲಿ ಅಕ್ರಮ ನಡೆಯದಂತೆ ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಬಹುದು ಎಂವುದರ ಬಗ್ಗೆ ಚರ್ಚೆ ನಡೆಸಿದರು.


ಸಭೆಯ ಬಳಿಕ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್​, ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಯಾವುದೇ ಕಾರಣಕ್ಕೂ ಅಕ್ರಮ ನಡೆಯದಂತೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚೆಯನ್ನು ನಡೆಸಿದ್ದೇವೆ. ತಂತ್ರಜ್ಞಾನಕ್ಕೆ ಸಂಬಂಧಿಸಿದ ಯಾವುದೇ ವಸ್ತುಗಳನ್ನು ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತರದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಅಭ್ಯರ್ಥಿಗಳು ವಾಚ್​ ಸೇರಿದಂತೆ ಆಧುನಿಕ ತಂತ್ರಜ್ಞಾನದ ಯಾವುದೇ ವಸ್ತುಗಳನ್ನೂ ಪರೀಕ್ಷಾ ಕೊಠಡಿಯ ಒಳಕ್ಕೆ ತರುವಂತಿಲ್ಲ ಎಂದು ಹೇಳಿದರು.

ಇದನ್ನು ಓದಿ : ಹೆಬ್ರಿಯ ಮನೆಯಲ್ಲಿ ಅನುಮಾನಾಸ್ಪದವಾಗಿ ತಾಯಿ, ಮಗಳ ಮೃತದೇಹ ಪತ್ತೆ : ಕೊಲೆ ಶಂಕೆ

ಇದನ್ನೂ ಓದಿ : three died in ksrtc bus and car collision : ಸರ್ಕಾರಿ ಬಸ್​ಗೆ ಕಾರು ಡಿಕ್ಕಿ : ಭಯಾನಕ ಅಪಘಾತದಲ್ಲಿ ಆರು ತಿಂಗಳ ಮಗು ಸೇರಿದಂತೆ ಮೂವರು ಸಾವು

during the teacher recruitment exam all this is banned

Comments are closed.