1 to 5 Class ಅ.25 ರಿಂದ ಆರಂಭ : ರಾಜ್ಯ ಸರಕಾರದ ಅಧಿಕೃತ ಆದೇಶ

ಬೆಂಗಳೂರು : ಕೊರೊನಾ ವೈರಸ್‌ ಸೋಂಕಿನ ಪ್ರಮಾಣ ಇಳಿಕೆಯಾದ ಬೆನ್ನಲ್ಲೇ ಕರ್ನಾಟಕದಲ್ಲಿ ಪೂರ್ಣ ಪ್ರಮಾಣದಲ್ಲಿ ಶಾಲೆಗಳನ್ನು ಆರಂಭಿಸಲು ರಾಜ್ಯ ಸರಕಾರ ಚಿಂತನೆ ನಡೆಸಿತ್ತು. ಇದೀಗ ಕೋವಿಡ್‌ ತಾಂತ್ರಿಕ ಸಮಿತಿ ಶಾಲೆಗಳನ್ನು ಆರಂಭಿಸುವ ಕುರಿತು ಗ್ರೀನ್‌ ಸಿಗ್ನಲ್‌ ನೀಡಿದ ಬೆನ್ನಲ್ಲೇ ರಾಜ್ಯದಲ್ಲಿ 1ರಿಂದ 5ನೇ ತರಗತಿ ಗಳನ್ನುಅಕ್ಟೋಬರ್‌ 25ರಿಂದ ಆರಂಭಿಸಲು ರಾಜ್ಯ ಸರಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕೃತ ಆದೇಶವನ್ನು ಹೊರಡಿಸಿದೆ.

ರಾಜ್ಯದಲ್ಲಿನ ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿನ 1ರಿಂದ 5ನೇ ತರಗತಿಗಳನ್ನುಅಕ್ಟೋಬರ್‌ 25 ತೆರೆಯಲಾಗುತ್ತಿದೆ. ಆದರೆ ಶಾಲೆಗಳಲ್ಲಿ ಮಕ್ಕಳನ್ನು ಶೇ.೫೦ರಷ್ಟು ಹಾಜರಾತಿಗೆ ಅವಕಾಶ ನೀಡಲಾಗಿದೆ. ಕೋವಿಡ್‌ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಲು ಸೂಚಿಸಲಾಗಿದೆ. ಶಾಲೆಗೆ ಬರುವ ಮಕ್ಕಳು ಕಡ್ಡಾಯವಾಗಿ ಪೋಷಕರಿಗೆ ಅನುಮತಿಯ ಪತ್ರವನ್ನು ತರಬೇಕು. ಆದರೆ ವಿದ್ಯಾರ್ಥಿಗಳು ಕಡ್ಡಾಯ ಹಾಜರಾತಿಯಿಂದ ವಿನಾಯಿತಿಯನ್ನು ನೀಡಲಾಗಿದೆ. ಶಾಲೆಗೆ ಬರುವ ಮಕ್ಕಳನ್ನು ಕಡ್ಡಾಯವಾಗಿ ಥರ್ಮಲ್‌ ಸ್ಕ್ಯಾನಿಂಗ್‌ಗೆ ಒಳಪಡಿಸಬೇಕು. ಶಿಕ್ಷಕರು ಫೇಸ್‌ ಶೀಲ್ಡ್‌ ಬಳಕೆ ಮಾಡಲು ಸೂಚಿಸಲಾಗಿದ್ದು, ಶಿಕ್ಷಕರು ಕಡ್ಡಾಯವಾಗಿ ಎರಡು ಡೋಸ್‌ ಕೊರೊನಾ ಲಸಿಕೆಯನ್ನು ಪಡೆದುಕೊಳ್ಳುವಂತೆ ತಿಳಿಸಲಾಗಿದೆ.

ಶಾಲೆಗಳಲ್ಲಿ ಮಕ್ಕಳು ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಪಾಲನೆ ಮಾಡಬೇಕು. ಶಾಲೆಯನ್ನು ಒಳಗೆ ಪ್ರವೇಶಿಸುವ ಹಾಗೂ ಹೊರಗೆ ತೆರಳುವ ವೇಳೆಯಲ್ಲಿ ಯಾವುದೇ ಕಾರಣಕ್ಕೂ ಗುಂಪುಗೂಡಲು ಅವಕಾಶ ನೀಡುವಂತಿಲ್ಲ. ಜ್ವರ ಸೇರಿದಂತೆ ಕೊರೊನಾ ಲಕ್ಷಣಗಳು ಕಂಡುಬಂದ್ರೆ ಅಂತಹ ವಿದ್ಯಾರ್ಥಿಗಳನ್ನು ತಪಾಸಣೆಗೆ ಒಳಪಡಿಸುವಂತೆ ಸೂಚನೆಯನ್ನು ನೀಡಲಾಗಿದೆ. ಇನ್ನು ರಾಜ್ಯದಲ್ಲಿ ಅಕ್ಟೋಬರ್‌ 25ರಿಂದ ಬೆಳಗಿನ ಅವಧಿಯಲ್ಲಿ ಮಾತ್ರವೇ ತರಗತಿಗಳು ಆರಂಭವಾಗಲಿದ್ದು, ನವೆಂಬರ್‌ 1ರಿಂದ ಬಿಸಿಯೂಟದ ಯೋಜನೆಯನ್ನು ಆರಂಭಿಸಿ ಪೂರ್ಣ ಪ್ರಮಾಣದಲ್ಲಿ ಶಾಲೆಗಳನ್ನು ತೆರೆಯಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ತಿಳಿಸಿದ್ದಾರೆ.

ಇದನ್ನೂ ಓದಿ : ಶಿಕ್ಷಕರಿಗೆ ಬಿಗ್‌ ಶಾಕ್‌ ಕೊಟ್ಟ ರಾಜ್ಯ ಸರಕಾರ

ಇದನ್ನೂ ಓದಿ : ರಾಜ್ಯದಲ್ಲಿ ಐದು ಸಾವಿರ ಶಿಕ್ಷಕರ ನೇಮಕ : ಸಚಿವ ಬಿ.ಸಿ.ನಾಗೇಶ್‌

Comments are closed.