SSLC ವಿದ್ಯಾರ್ಥಿಗಳಿಗೆ ಕರೆ ಮಾಡಿ ಶಿಕ್ಷಣ ಸಚಿವರು ಹೇಳಿದ್ದೇನು ಗೊತ್ತಾ ?

0

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದೇಶದಾದ್ಯಂತ ಲಾಕ್ ಡೌನ್ ಆದೇಶ ಜಾರಿಯಲ್ಲಿದೆ. ಲಾಕ್ ಡೌನ್ ಆದೇಶ ಘೋಷಣೆಯಾಗುತ್ತಲೇ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಮೂಂದೂಡಲಾಗಿತ್ತು. ತದನಂತರದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಡದಾಡಿದ ಸುದ್ದಿಗಳಿಂದ ವಿದ್ಯಾರ್ಥಿಗಳು ಗೊಂದಲಕ್ಕೀಡಾಗಿದ್ದರು. ಈ ನಿಟ್ಟಿನಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಖದ್ದು ರಾಜ್ಯದ ನಾನಾ ಭಾಗಗಳ ವಿದ್ಯಾರ್ಥಿಗಳಿಗೆ ಕರೆ ಮಾಡಿ ಗೊಂದಲ ಪರಿಹರಿಸೋದ್ರ ಜೊತೆಗೆ ಆತ್ಮ ವಿಶ್ವಾಸವನ್ನು ಮೂಡಿಸಿದ್ದಾರೆ.

ಸಚಿವ ಸುರೇಶ್ ಕುಮಾರ್ ಅವರು, ತಮ್ಮ ಕಚೇರಿಯಲ್ಲಿ ರಾಜ್ಯದ ಬೆಂಗಳೂರು, ಬಳ್ಳಾರಿ, ಕೊಪ್ಪಳ, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಕರೆ ಮಾಡಿ ಅಭಿಪ್ರಾಯಗಳನ್ನು ಸಂಗ್ರಹಿಸಿದ್ರು. ವಿದ್ಯಾರ್ಥಿಗಳಿಗಿದ್ದ ಆತಂಕವನ್ನು ದೂರ ಮಾಡುವುದರ ಜೊತೆಗೆ ಪರೀಕ್ಷೆಗೆ ಮಾಡಿಕೊಳ್ಳಬೇಕಾದ ಪೂರ್ವ ಸಿದ್ದತೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

ಪರೀಕ್ಷೆ ಮುಂದಕ್ಕೆ ಹೋಗಿದ್ದರಿಂದ ಮಕ್ಕಳು ಆತ್ಮವಿಶ್ವಾಸ ಕಳೆದುಕೊಳ್ಳದಂತೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದರು.ಇಲಾಖೆಯ ಆಯುಕ್ತರ ಹಂತದಿಂದ ಹಿಡಿದು ನಿರ್ದೇಶಕರು, ಉಪನಿರ್ದೇಶಕರು, ಬಿಇಒ, ಕ್ಲಸ್ಟರ್ ಹಾಗೂ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರ ಹಂತದವರೆಗೂ ಎಲ್ಲರೂ ವಿದ್ಯಾರ್ಥಿಗಳೊಂದಿಗೆ ಸಂಪರ್ಕ ಸಾಧಿಸಿ ಆತ್ಮವಿಶ್ವಾಸ ಮೂಡಿಸುವ ಕೆಲಸವನ್ನು ಸಮರೋಪಾದಿಯಲ್ಲಿ ಮಾಡಬೇಕು ಎಂದು ಸೂಚನೆ ನೀಡಿದ್ದರು.

ಅದರ ಭಾಗವಾಗಿ ಇಂದು ತಾವೇ ಮಕ್ಕಳೊಂದಿಗೆ ಮಾತನಾಡಿ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಿದ್ದು ವಿಶೇಷವಾಗಿತ್ತು. ವಿದ್ಯಾರ್ಥಿಗಳಿಂದ ಅಭಿಪ್ರಾಯಗಳನ್ನು ಸಂಗ್ರಹಿಸಿದ ಶಿಕ್ಷಣ ಸಚಿವರು, ಯಾವುದೇ ವದಂತಿ ಹಾಗೂ ಸುಳ್ಳು ಸುದ್ದಿಗಳಿಗೆ ಕಿವಿಗೊಡದಂತೆ ಸೂಚನೆ ನೀಡಿದ್ದಾರೆ.

Leave A Reply

Your email address will not be published.