ದಸರಾ ಬಳಿಕ ಬಿಸಿಯೂಟ, 1- 5 ನೇ ತರಗತಿ ಆರಂಭ : ಸಚಿವ ಬಿ.ಸಿ.ನಾಗೇಶ್‌

ಉಡುಪಿ : ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿನ ಪಾಸಿಟಿವಿ ದರ ಕಡಿಮೆಯಾಗುತ್ತಿದೆ. ಬಹುತೇಕ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗುತ್ತಿದೆ. ಹೀಗಾಗಿ ದಸರಾ ನಂತರದಲ್ಲಿ ರಾಜ್ಯದಲ್ಲಿ 1 ರಿಂದ 5ನೇ ತರಗತಿ ವರೆಗಿನ ಶಾಲೆಗಳನ್ನು ಆರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ತಿಳಿಸಿದ್ದಾರೆ.

ಉಡುಪಿಗೆ ಆಗಮಿಸಿದ್ದ ಅವರು ಒಳಕಾಡು ಶಾಲೆಗೆ ತೆರಳಿ ಶೈಕ್ಷಣಿಕ ಚಟುವಟಿಕೆಯ ಬಗ್ಗೆ ಪರಿಶೀಲನೆಯನ್ನು ನಡೆಸಿದ್ದಾರೆ. ಈ ವೇಳೆಯಲ್ಲಿ ಸಂಪ್ರೀತಿ ಎಂಬ ಬಾಲಕಿ 1 ರಿಂದ 5 ನೇ ತರಗತಿ ವರೆಗಿನ ಶಾಲೆಯನ್ನು ಆರಂಭಿಸುವಂತೆ ಕೇಳಿಕೊಂಡಿದ್ದಾಳೆ. ಇದಕ್ಕೆ ಸಚಿವರು ಆನ್‌ಲೈನ್‌ ಕ್ಲಾಸ್‌ ಅರ್ಥವಾಗುವುದಿಲ್ಲವೇ ಎಂದು ಪ್ರಶ್ನಿಸಿದ್ದಾಳೆ. ಆದರೆ ಬಾಲಕಿ ತಮಗೆ ತರಗತಿಯಲ್ಲೇ ಪಾಠ ಬೋಧನೆ ಮಾಡಿ ಎಂದಿದ್ದಾಳೆ. ಇದರ ಬೆನ್ನಲ್ಲೇ ಮಾಧ್ಯಮದವರೊಂದಿಗೆ ಸಚಿವರು ಮಾತನಾಡಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಶಾಲೆಗಳು ಆರಂಭವಾಗಿದ್ದು, ವಿದ್ಯಾರ್ಥಿಗಳು ಹುಮ್ಮಸ್ಸಿನಿಂದಲೇ ಶಾಲೆಗೆ ಆಗಮಿಸುತ್ತಿದ್ದಾರೆ. ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಶಾಲೆಗೆ ಆಗಮಿಸುತ್ತಿದ್ದಾರೆ. ಹಾಜರಾತಿಯ ಪ್ರಮಾಣ ಕೂಡ ಶೇ.90ಕ್ಕಿಂತಲೂ ಅಧಿಕ ಇದೆ. ಶಾಲೆಗಳಲ್ಲಿ ಮಕ್ಕಳ ಹಾಜರಾತಿ ತನಗೆ ತೃಪ್ತಿ ತಂದಿದೆ ಎಂದಿದ್ದಾರೆ.

ದಸರಾ ನಂತರದಲ್ಲಿ ಶಾಲಾರಂಭ ಮಾಡಲಾಗುತ್ತದೆ. ಪೂರ್ಣ ಪ್ರಮಾಣದಲ್ಲಿ ಶಾಲಾರಂಭ ಮಾಡಲು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಕೂಡ ಉತ್ಸುಕರಾಗಿದ್ದಾರೆ. ಹೀಗಾಗಿ ಕೋವಿಡ್‌ ತಾಂತ್ರಿಕ ಸಮಿತಿಯ ಸಭೆಯನ್ನು ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಇನ್ನು ವಿದ್ಯಾರ್ಥಿಗಳು ಇಡೀ ದಿನ ಶಾಲೆಗಳಲ್ಲಿ ಇರುವ ಹಿನ್ನೆಲೆಯಲ್ಲಿ ಬಿಸಿಯೂಟವನ್ನು ಶೀಘ್ರದಲ್ಲಿಯೇ ಆರಂಭಿಸಲಾಗುವುದು ಎಂದಿದ್ದಾರೆ.

ಇದನ್ನೂ ಓದಿ : ಉಪನ್ಯಾಸಕರ ನೇಮಕಕ್ಕೆ Ph.D ಕಡ್ಡಾಯವಲ್ಲ : ಸ್ಪಷ್ಟನೆ ನೀಡಿದ ಕೇಂದ್ರ ಶಿಕ್ಷಣ ಸಚಿವಾಲಯ

ಇದನ್ನೂ ಓದಿ : ಅಂಧ ಶಿಕ್ಷಕರಿಗೆ ವಿದ್ಯಾರ್ಥಿಗಳಿಂದ ಅವಮಾನ : ತನಿಖೆಗೆ ಆದೇಶಿಸಿದ ಶಿಕ್ಷಣ ಇಲಾಖೆ

( After Dussehra start 1st Class 5th : Minister BC Nagesh )

Comments are closed.