GOOD NEWS : ಕನ್ನಡ ಮಾಧ್ಯಮದಲ್ಲಿ ಕಲಿಯ ಬಹುದು ಇಂಜಿನಿಯರಿಂಗ್ ಶಿಕ್ಷಣ

ಬೆಂಗಳೂರು : ಇಂಜಿನಿಯರಿಂಗ್ ಶಿಕ್ಷಣವನ್ನು ಕನ್ನಡ ಮಾಧ್ಯಮದಲ್ಲಿ ಕಲಿಯಬೇಕು ಆನ್ನುವವರಿಗೆ ರಾಜ್ಯ ಸರಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ರಾಜ್ಯದ ನಾಲ್ಕು ಕಾಲೇಜುಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ವಿದ್ಯಾಭ್ಯಾಸ ಆರಂಭ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ನಾಲ್ಕು ಕಾಲೇಜುಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ ಬೋಧನೆ ಮಾಡಲಾಗುವುದು. ಭಾಲ್ಕಿಯ ಭೀಮಣ್ಣ ಖಂಡ್ರೆ ಕಾಲೇಜು, ವಿಜಯಪುರದ ಬಿಎಲ್ ಡಿಇ ಕಾಲೇಜು, ಚಿಕ್ಕಬಳ್ಳಾಪುರದ ಎಸ್.ಜೆ.ಆರ್ ಕಾಲೇಜು, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ಪ್ರಾರಂಭ ಮಾಡಲಾಗುವುದು. ಈಗಾಗಲೇ ಕನ್ನಡದಲ್ಲಿ ಪಠ್ಯ ಪುಸ್ತಕ ಸಿದ್ಧತೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: GOOD NEWS : ಶಾಲಾ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ ಹೆಚ್ಚಳ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರಸಕ್ತ ವರ್ಷ 20,000 ರೂ.ಗಿಂತ ಹೆಚ್ಚು ಶುಲ್ಕವನ್ನು ತೆಗೆದುಕೊಳ್ಳುವಂತಿಲ್ಲ. ಇತರೆ ಶುಲ್ಕಗಳ ಮಿತಿ 20 ಸಾವಿರ ನಿಗದಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: CET RESULT 2021 : ನಾಳೆ ಸಿಇಟಿ ಫಲಿತಾಂಶ ಪ್ರಕಟ : ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್‌ ಮಾಡಿ

(Engineering education in Kannada medium)

Comments are closed.