ಮಂಗಳವಾರ, ಏಪ್ರಿಲ್ 29, 2025
HomeeducationGOOD NEWS : ಶಾಲಾ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌

GOOD NEWS : ಶಾಲಾ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌

- Advertisement -

ಬೆಂಗಳೂರು : ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಮುಚ್ಚಿದ ಶಾಲೆಯ ಬಾಗಿಲು ತೆರೆದಿದೆ. ಪೂರ್ಣ ಪ್ರಮಾಣದಲ್ಲಿ ಶಾಲಾರಂಭ ಮಾಡೋದಕ್ಕೂ ರಾಜ್ಯ ಸರಕಾರ ಸಿದ್ದತೆ ನಡೆಸಿದೆ. ಈ ನಡುವಲ್ಲೇ ಶಾಲಾ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಲೆಗಳು ಆರಂಭಗೊಂಡಿದ್ದು, ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮಕ್ಕೆ ಮರುಚಾಲನೆ ನೀಡಲು ಚಿಂತನೆ ನಡೆದಿದೆ. ಈ ಸಂಬಂಧ ಶೀಘ್ರದಲ್ಲೇ ನಿರ್ಣಯ ತೆಗೆದುಕೊಳ್ಳಲಿದ್ದೇವೆ.

ಇದನ್ನೂ ಓದಿ: ಭಾರತ್‌ ಬಂದ್‌ ಹಿನ್ನೆಲೆ : ಬೆಂಗಳೂರು ನಗರ ವಿವಿ ಎಲ್ಲಾ ಪರೀಕ್ಷೆಗಳು ಮುಂದೂಡಿಕೆ

ಕೊರೊನಾ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಸಾರ್ವಜನಿಕ ನಿರ್ದೇಶನಾ ಇಲಾಖೆಯು ಮಧ್ಯಾಹ್ನದ ಬಿಸಿಯೂಟವನ್ನು ರದ್ದು ಮಾಡಿತ್ತು. ಸದ್ಯದ ಮಟ್ಟಿಗೆ ಬಿಸಿಯೂಟದ ಬದಲಿಗೆ ಮಕ್ಕಳಿಗೆ ರೇಷನ್ ಅನ್ನು ಶಾಲೆಗಳಲ್ಲಿ ಪೂರೈಸಲಾಗುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ: CET RESULT 2021 : ನಾಳೆ ಸಿಇಟಿ ಫಲಿತಾಂಶ ಪ್ರಕಟ : ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್‌ ಮಾಡಿ

ಮಧ್ಯಾಹ್ನದ ಬಿಸಿಯೂಟವನ್ನು ಮರು ಆರಂಭಿಸಲು ಮಕ್ಕಳು, ಪೋಷಕರು, ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಯಿಂದ ಆಗ್ರಹಗಳು ಬರುತ್ತಿವೆ. ನಾನು ಶಾಲೆಗಳಿಗೆ ಭೇಟಿ ನೀಡಿ ಮಕ್ಕಳೊಂದಿಗೆ ಸಮಾಲೋಚನೆ ನಡೆಸುತ್ತಿದ್ದೇನೆ. ತಾವು ಮನೆಯಿಂದ ಊಟ ತರುತ್ತಿರುವುದಾಗಿ ಮಕ್ಕಳು ಹೇಳುತ್ತಿದ್ದಾರೆ. ಆದರೆ ನಾವು ಅವರಿಗೆ ಶಾಲೆಯಲ್ಲೇ ಮಧ್ಯಾಹ್ನದ ಊಟ ನೀಡಲು ಆರಂಭಿಸಲಿದ್ದೇವೆ ಎಂದಿದ್ದಾರೆ.

(Education Minister BC Nagesh gave good news to school students)

RELATED ARTICLES

Most Popular