ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ 2026 : 6ನೇ ತರಗತಿ ಪ್ರವೇಶಕ್ಕೆ ಇಂದೇ ಅರ್ಜಿ ಸಲ್ಲಿಸಿ
Morarji Desai Residential School admission 2026: ಹಿಂದುಳಿದ ವರ್ಗಕ್ಕೆ ಸೇರಿದ ಮಕ್ಕಳಿಗೆ ಉಚಿತ ವಸತಿಯ ಜೊತೆಗೆ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯು ಒಂದು.
ಉಚಿತ ಶಿಕ್ಷಣ ನೀಡುವ ಈ ವಸತಿ ಶಾಲೆಗಳು ದಿನದಿಂದ ದಿನಕ್ಕೆ ಶಾಲಾ ಫೀಸುಗಳ ಹೊರೆ ಹೆಚ್ಚಾಗುತ್ತಿರುವ ಈ ಕಾಲದಲ್ಲಿ ವರದಾನವಾಗಿವೆ. ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಮಕ್ಕಳಿಗೆ ಇಲ್ಲಿ ಅಡಿಪಾಯ ಹಾಕಿಕೊಡಲಾಗುವುದು.
2026–2027 ನೇ ಸಾಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಹಾಗಾದರೆ ಈ ಶಾಲೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು ಎಂದು ತಿಳಿಯೋಣ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು?
ವಿದ್ಯಾರ್ಥಿಯು ಪ್ರಸ್ತುತ ಕರ್ನಾಟಕದ ಯಾವುದೇ ಶಾಲೆಯಲ್ಲಿ 5 ನೇ ತರಗತಿ ಓದುತ್ತಿರಬೇಕು.
ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 2.5 ಲಕ್ಷ ರೂ. ಮೀರಿರಬಾರದು.
ಮಗುವಿನ ವಯಸ್ಸು ಮಗುವಿನ ವಯಸ್ಸು 13 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳ ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, SATS ಸಂಖ್ಯೆ (ಇದನ್ನು ಶಾಲೆಯಿಂದ ಪಡೆದುಕೊಳ್ಳಬಹುದು).
ಇದನ್ನೂ ಓದಿ: ವಿದ್ಯಾರ್ಥಿಗಳಿಗೆ 1.15 ಲಕ್ಷದವರೆಗೆ ಆರ್ಥಿಕ ನೆರವು: ಸಾಂದೀಪನಿ ಶಿಷ್ಯವೇತನದ ಬಗ್ಗೆ ತಿಳಿಯಿರಿ
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 11–01–2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31–01–2026
ಪ್ರವೇಶ ಪರೀಕ್ಷೆಯ ದಿನಾಂಕ : 15–02–2026



