NEET 2021 : ನಾಳೆಯಿಂದ ನೀಟ್‌ ಪರೀಕ್ಷೆ ಆರಂಭ : ಪರೀಕ್ಷೆಗೆ ನೋಂದಣಿ ಮಾಡಿದ 16 ಲಕ್ಷ ವಿದ್ಯಾರ್ಥಿಗಳು

ಬೆಂಗಳೂರು : ಕೊರೊನಾ ವೈರಸ್‌ ಸೋಂಕಿನ ನಡುವಲ್ಲೇ 2020-21 ನೇ ಸಾಲಿನ ನೀಟ್ ಪರೀಕ್ಷೆ ನಾಳೆ ನಡೆಯಲಿದೆ. ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಯಲಿರುವ ಪರೀಕ್ಷೆಗೆ ಬರೋಬ್ಬರಿ 16 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ.

ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಆಯುಷ್ ಕೋರ್ಸ್ ಗಳಿಗೆ ಪರೀಕ್ಷೆ ನಡೆಯಲಿದ್ದು, ದೇಶದ ಒಟ್ಟು 201 ಪ್ರಮುಖ ನಗರಗಳಲ್ಲಿ ಕರ್ನಾಟಕದ 9 ನಗರಗಳಲ್ಲಿ ಪರೀಕ್ಷೆ ನಡೆಸಲು ಸಿದ್ದತೆಗಳನ್ನು ಪೂರ್ಣ ಗೊಳಿಸಲಾಗಿದೆ.

ಬೆಂಗಳೂರು, ಮೈಸೂರು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಗುಲ್ಬರ್ಗಾ, ಬೆಳಗಾವಿ, ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಪರೀಕ್ಷೆ ನಡೆಯಲಿದೆ. ಒಟ್ಟು 180 ಪ್ರಶ್ನೆಗಳಿರಲಿದ್ದು, ಪ್ರತಿ ಪ್ರಶ್ನೆಗೆ 4 ಅಂಕದಂತೆ ಒಟ್ಟು 720 ಅಂಕಗಳಿಗೆ ಪರೀಕ್ಷೆ ನಡೆಯಲಿದೆ.

ಇದನ್ನೂ ಓದಿ : ಶಾಲಾ ಮಕ್ಕಳಿಗೆ ದಸರಾ, ಬೇಸಿಗೆ ರಜೆ ಘೋಷಣೆ : ಸರಕಾರದ ಆದೇಶ

ಇದನ್ನೂ ಓದಿ : ಶಿಕ್ಷಕರ ರಜೆಗೆ ಬೀಳುತ್ತೆ ಕತ್ತರಿ : ಪ್ರಾಥಮಿಕ ಶಾಲಾರಂಭದ ಬಗ್ಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಹೇಳಿದ್ದೇನು ?

( 16 lakh studentsRegistered for NEET Examination )

Comments are closed.