School Close Karnataka : ಶಾಲೆಗಳ ಮೇಲೆ‌ ಮತ್ತೆ ಕೊರೊನಾ ಕರಿನೆರಳು: ಮತ್ತೆ ಬಾಗಿಲು‌ಮುಚ್ಚಲಿದೆ ಶಿಕ್ಷಣ ಸಂಸ್ಥೆಗಳು ?!

ಬೆಂಗಳೂರು : ರಾಜ್ಯದಲ್ಲಿ ಓಮಿಕ್ರಾನ್ ಭಯದ ನಡುವೆಯೇ ಕೊರೋನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಲಾರಂಭಿಸಿದ್ದು ಸರ್ಕಾರದ ಆತಂಕಕ್ಕೆ‌ ಕಾರಣವಾಗಿದೆ. ಅದರಲ್ಲೂ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಮಕ್ಕಳು ಕೊರೋ‌ನಾ ಸೋಂಕಿಗೆ ಗುರಿಯಾಗುತ್ತಿದ್ದು, ಪೋಷಕರ ಆತಂಕಕ್ಕೆ ಕಾರಣವಾಗಿದೆ. ಈ ಮಧ್ಯೆ ಪೋಷಕರ ಆತಂಕಕ್ಕೆ ತೆರೆ ಎಳೆದಿರುವ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೋಂಕು ಹೀಗೆ ಮುಂದುವರೆದರೇ ಶಾಲೆ ನಿಲ್ಲಿಸುವ (School Close Karnataka) ಹಾಗೂ ಪರೀಕ್ಷೆ ನಿಲುಗಡೆಯ ನಿರ್ಧಾರಕ್ಕೆ ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.

ಕೊರೋನಾ ಸೋಂಕಿನ ಪ್ರಮಾಣ ಶಾಲೆಗಳಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳ ಜೊತೆ ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಬಿ.ಸಿ.ನಾಗೇಶ್, ಕೆಲವು ಶಾಲೆ, ಕಾಲೇಜುಗಳಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗಿದೆ‌ ಒಂದೊಮ್ಮೆ ಸೋಂಕಿನ ಪ್ರಮಾಣ ಹೀಗೆ ಮುಂದುವರೆದರೆ ಶಾಲೆ ನಿಲ್ಲಿಸುವ ಪರೀಕ್ಷೆ ಮುಂದೂಡುವ ಅಗತ್ಯ ಎದುರಾದರೆ ಅದಕ್ಕೆ ಬದ್ಧವಾಗಿದೆ ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ.

ರಾಜ್ಯದ ಹಲವು ವಸತಿ, ನವೋದಯ ಶಾಲೆಗಳಲ್ಲಿ ಸೋಂಕು ಕಾಣಿಸಿಕೊಂಡಿರುವುದು ಆತಂಕ ತಂದಿದೆ. 1-10 ತರಗತಿಯ ಸರ್ಕಾರಿ ಶಾಲೆಗಳಲ್ಲಿ ಸೋಂಕು ಕಂಡು ಬಂದಿಲ್ಲ. ಇದರಿಂದ ಮಕ್ಕಳಿಗೆ ತೊಂದರೆ ಆಗಿಲ್ಲ, ಚಿಕಿತ್ಸೆ ಕೊಡಲಾಗಿದೆ ಮುಂದಿನ ದಿನಗಳಲ್ಲಿ ಸೋಂಕು ಹೆಚ್ಚಳ ಆದ್ರೆ ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಕೊರೊನಾ ಮಾರ್ಗಸೂಚಿಗಳನ್ನು ಕಠಿಣವಾಗಿ ಪಾಲಿಸುತ್ತೇವೆ, ನಾಳೆ, ನಾಡಿದ್ದು, ಸೋಂಕಿತ ವಸತಿ, ನವೋದಯ ಶಾಲೆಗಳಿಗೆ ಭೇಟಿ ಕೊಡಲಿದ್ದೇನೆ ಎಂದಿದ್ದಾರೆ.

ಪೋಷಕರು ಯಾರೂ ಕೂಡ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಯಾಕಂದ್ರೆ ಕೋವಿಡ್ ಮಕ್ಕಳ ಮೇಲೆ ಯಾವುದೇ ಪರಿಣಾಮ ಬೀರಲ್ಲ ಅಂತ ವರದಿಗಳು ಬಂದಿವೆ. ತಜ್ಞರು ಮೂರನೇ ಅಲೆ ಫೆಬ್ರವರಿ ಅಂತ್ಯಕ್ಕೆ ಬರಬಹುದು ಅಂತಿದಾರೆ ಪರೀಕ್ಷೆ ಸಂದರ್ಭದಲ್ಲಿ ಸೋಂಕು ಹೆಚ್ಚಾದರೆ ಅಗತ್ಯ ಕ್ರಮ ಕೈಗೊಂಡು ಪರೀಕ್ಷೆ ಮತ್ತು ಶಾಲೆಗಳನ್ನು ನಿಲ್ಲಿಸಲು ಬದ್ಧವಾಗಿದ್ದೇವೆ ಎಂದು ಸಚಿವರು ಪೋಷಕರಿಗೆ ಆಭಯ ನೀಡಿದ್ದಾರೆ.

ಸರ್ಕಾರ ತಜ್ಞರ ಜೊತೆ ನಿರಂತರ ಸಂಪರ್ಕದಲ್ಲಿದೆ ಎಂದಿರುವ ಸಚಿವರು ಸಂಬಂಧಪಟ್ಟ ಜಿಲ್ಲಾಧಿಕಾರಿಗಳ ಜೊತೆಯೂ ಮಕ್ಕಳ ಸುರಕ್ಷತೆ ಬಗ್ಗೆ ಚರ್ಚಿಸಲಾಗಿದೆ. ಪರೀಕ್ಷೆ ಒಳಗಾಗಿ ಮಕ್ಕಳಿಗೂ ವ್ಯಾಕ್ಸಿನ್ ಬರುವ ಸಾಧ್ಯತೆ ಇದೆ ಗಾಬರಿಯಾಗೋದು ಬೇಡ. ಕೋವಿಡ್ ನಿಯಮಾವಳಿಯಂತೆ ಪರೀಕ್ಷೆ ನಡೆಸುತ್ತೇವೆ ಎಂದು ಸಚಿವರು ಹೇಳಿದ್ದಾರೆ. ರಾಜ್ಯದ ಮಡಿಕೇರಿ, ಹಾಸನ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶಾಲಾ ಮಕ್ಕಳು ಹಾಗೂ ಕೆಲವೆಡೆ ವಸತಿ ಶಾಲೆಯ ಮಕ್ಕಳು ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.

ಇದನ್ನೂ ಓದಿ : School Close : ರಾಜ್ಯದಲ್ಲಿ ಶಾಲೆ, ಕಾಲೇಜುಗಳು ಬಂದ್‌ : ಸುಳಿವು ಕೊಟ್ಟ ಸಿಎಂ ಬೊಮ್ಮಾಯಿ

ಇದನ್ನೂ ಓದಿ : PUC EXAMS 2022 : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಧ್ಯವಾರ್ಷಿಕ ಪರೀಕ್ಷೆಯ ಅಂಕವೇ ನಿರ್ಣಾಯಕ

(School close Karnataka : Corona fear is back on Karnatakas schools door will Close again)

Comments are closed.