SSLC RESULT : ಎಸ್‌ಎಸ್ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ : ರಿಸಲ್ಟ್‌ ನೋಡಲು ಇಲ್ಲಿ ಕ್ಲಿಕ್‌ ಮಾಡಿ

ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಶೇ. 55.54 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸೆಪ್ಟೆಂಬರ್‌ 27 ಮತ್ತು 29 ರಂದು ಪೂರಕ ಪರೀಕ್ಷೆ ಯನ್ನು ನಡೆಸಲಾಗಿತ್ತು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ಫಲಿತಾಂಶವನ್ನು ಪ್ರಕಟಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯಲ್ಲಿ ಒಟ್ಟು 53,155 ವಿದ್ಯಾರ್ಥಿಗಳು ನೋದಣಿ ಮಾಡಿಕೊಂಡು ಪರೀಕ್ಷೆಯನ್ನು ಬರೆದಿದ್ದರು. ಆದರೆ 29,522 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ. 55.54 ಫಲಿತಾಂಶ ದಾಖಲಾಗಿದೆ ಮಧ್ಯಾಹ್ನ 3 ಗಂಟೆಯ ನಂತರದಲ್ಲಿ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಅಲ್ಲದೇ ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್‌ ಸಂಖ್ಯೆಗೆ ಎಸ್‌ಎಂಎಸ್‌ ಮೂಲಕ ಫಲಿತಾಂಶ ತಿಳಿಸಲಾಗುವುದು ಎಂದು ಕರ್ನಾಟಕ ಪ್ರೌಢಶಾಲಾ ಪರೀಕ್ಷಾ ಮಂಡಳಿಯ ನಿರ್ದೇಶಕಿ ವಿ.ಸುಮಂಗಳಾ ತಿಳಿಸಿದ್ದಾರೆ.

ಪೂರಕ ಪರೀಕ್ಷೆಯಲ್ಲಿ ಮೂಡಬಿದಿರೆಯ ಆಳ್ವಾಸ್‌ ಕಾಲೇಜಿನ ಗ್ರೀಷ್ಮಾ ನಾಯಕ್‌ 625 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದದಾರೆ. ಪರೀಕ್ಷಾ ಶುಲ್ಕ ಪಾವತಿ ಮಾಡದ ಹಿನ್ನೆಲೆಯಲ್ಲಿ ಗ್ರೀಷ್ಮಾ ನಾಯಕ್‌ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಬರೆದಿರಲಿಲ್ಲ. ನಂತರದಲ್ಲಿ ಶಿಕ್ಷಣ ಸಚಿವರಾಗಿದ್ದ ಸುರೇಶ್‌ ಕುಮಾರ್‌ ಗ್ರೀಷ್ಮಾ ನಾಯಕ್‌ ಮನೆಗೆ ಭೇಟಿ ನೀಡಿ ಪರೀಕ್ಷೆ ಬರೆಯಲು ಬಾಲಕಿಗೆ ಧೈರ್ಯ ತುಂಬಿದ್ದರು. ಇದೀಗ ಗ್ರೀಷ್ಮಾ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ.‌

ಇದನ್ನೂ ಓದಿ : GOOD NEWS : ಶಿಕ್ಷಕರ ವರ್ಗಾವಣೆ, ನೇಮಕಾತಿ : ಸಚಿವ ನಾಗೇಶ್‌ ಮಹತ್ವದ ಮಾಹಿತಿ

ಇದನ್ನೂ ಓದಿ : ಉಪನ್ಯಾಸಕರ ನೇಮಕಕ್ಕೆ Ph.D ಕಡ್ಡಾಯವಲ್ಲ : ಸ್ಪಷ್ಟನೆ ನೀಡಿದ ಕೇಂದ್ರ ಶಿಕ್ಷಣ ಸಚಿವಾಲಯ

( SSLC Supplementary Exam Results Published: Click here to see Result )

Comments are closed.