GOOD NEWS : ಶಿಕ್ಷಕರ ವರ್ಗಾವಣೆ, ನೇಮಕಾತಿ : ಸಚಿವ ನಾಗೇಶ್‌ ಮಹತ್ವದ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಖಾಲಿ ಉಳಿದಿರುವ 40 ಸಾವಿರ ಶಿಕ್ಷಕರ ಕೊರತೆ ಎದುರಿಸುತ್ತಿದ್ದು, ಶೀಘ್ರದಲ್ಲಿಯೇ ಶಿಕ್ಷಕರ ನೇಮಕಾತಿಯನ್ನು ಆರಂಭಿಸಲಾಗುವುದು. ಅಲ್ಲದೇ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಕ್ರಮಕೈಗೊಳ್ಳಲಾಗುತ್ತಿದ್ದು, ಪರಸ್ಪರ ವರ್ಗಾವಣೆಗೆ ಅವಕಾಶ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ತಿಳಿಸಿದ್ದಾರೆ.

ಸುವರ್ಣ ನ್ಯೂಸ್‌ನಲ್ಲಿ ನಡೆದ ಹಲೋ ಮಿನಿಸ್ಟರ್‌ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಚಿವರು ಶಿಕ್ಷಕರ ಹಲವು ಸಮಸ್ಯೆಯ ಕುರಿತು ಚರ್ಚೆ ನಡೆಸಿದ್ದಾರೆ. ಶಿಕ್ಷಕರ ವರ್ಗಾವಣೆ, ಶಾಲೆಗಳಲ್ಲಿನ ಮೂಲ ಸೌಕರ್ಯ, ವಿದ್ಯಾರ್ಥಿಗಳ ಶಾಲಾ ಶುಲ್ಕ ಸೇರಿದಂತೆ ಹಲವು ಸಮಸ್ಯೆಗಳನ್ನು ಶಿಕ್ಷಕರು ಹಾಗೂ ಪೋಷಕರು ಸಚಿವರ ಗಮನಕ್ಕೆ ತಂದಿದ್ದಾರೆ. ಅದ್ರಲ್ಲೂ ರಾಜ್ಯದಲ್ಲಿನ ಸಾಕಷ್ಟು ಶಿಕ್ಷಕರು ವರ್ಗಾವಣೆಗಾಗಿ ಎದುರು ನೋಡುತ್ತಿದ್ದಾರೆ. ನಾನಾ ಕಾರಣಗಳಿಂದಾಗಿ ಕಳೆದ ಎರಡು ವರ್ಷಗಳಿಂದಲೂ ಶಿಕ್ಷಕರ ವರ್ಗಾವಣೆ ನಡೆದಿಲ್ಲ.

ರಾಜ್ಯದಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಶಿಕ್ಷಕರು ತಮ್ಮ ತವರು ಜಿಲ್ಲೆಗ ಮರಳಲು ಅತೀ ಹೆಚ್ಚು ಸಂಖ್ಯೆಯಲ್ಲಿ ಕಾಯುತ್ತಿದ್ದಾರೆ. ಶಿಕ್ಷಕರ ನೇಮಕಾತಿಯ ಸಂದರ್ಭದಲ್ಲಿ ಆಯಾಯ ಜಿಲ್ಲೆಯಲ್ಲಿನ ಶಾಲೆಗಳಿಗೆ ನೇಮಕಾತಿ ಮಾಡಲಾಗಿತ್ತು. ಈ ವೇಳೆಯಲ್ಲಿ ದಕ್ಷಿಣ ಕರ್ನಾಟಕ ಭಾಗದ ಶಿಕ್ಷಕರೇ ಹೆಚ್ಚಾಗಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದರಿಂದಾಗಿಯೇ ಅತೀ ಹೆಚ್ಚು ಸಮಸ್ಯೆ ಉಂಟಾಗಿದೆ. ಈಗಾಗಲೇ ಪತಿ, ಪತ್ನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕರ ಸಂಘವನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಂಡಿದ್ದೇವೆ. ತಕ್ಷಣಕ್ಕೆ ಸುಮಾರು 4 ರಿಂದ 5 ಸಾವಿರ ಶಿಕ್ಷಕರಿಗೆ ವರ್ಗಾವಣೆಯ ಅಗತ್ಯವಿದೆ ಅನ್ನೋದು ಗಮನಕ್ಕೆ ಬಂದಿದೆ. ಈ ಕುರಿತು ಶಿಕ್ಷಣ ಇಲಾಖೆಯ ಅಧಿಕಾರಿಗಳ ಕುರಿತು ಚರ್ಚೆ ನಡೆಸಿ ವರ್ಗಾವಣೆಯ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ.

ಇನ್ನು ರಾಜ್ಯದಲ್ಲಿ ಖಾಲಿ ಉಳಿದಿರುವ ಶಿಕ್ಷಕರ ಹುದ್ದೆ ಭರ್ತಿಗೆ ಶೀಘ್ರದಲ್ಲಿಯೇ ಕ್ರಮಕೈಗೊಳ್ಳಲಾಗುತ್ತದೆ. ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಪ್ರತೀ 2 ರಿಂದ 3 ತಿಂಗಳಿಗೊಮ್ಮೆ ಸಿಇಟಿ ಪರೀಕ್ಷೆ ನಡೆಸಲು ಚಿಂತನೆಯನ್ನು ನಡೆಸಲಾಗಿದೆ ಎಂದ ಅವರು, ಸಿ ಆಂಡ್‌ ಆರ್‌ ನಿಯಮದಲ್ಲಿ ಬದಲಾವಣೆಯನ್ನು ತರಲಾಗುತ್ತದೆ ಎಂದಿದ್ದಾರೆ.

ಇದನ್ನೂ ಓದಿ : ದಸರಾ ಬಳಿಕ ಬಿಸಿಯೂಟ, 1- 5 ನೇ ತರಗತಿ ಆರಂಭ : ಸಚಿವ ಬಿ.ಸಿ.ನಾಗೇಶ್‌

ಇದನ್ನೂ ಓದಿ : ಅಕ್ಟೋಬರ್‌ 10 ರಿಂದ ಪಿಯುಸಿ ವಿದ್ಯಾರ್ಥಿಗಳಿಗೆ ದಸರಾ ರಜೆ

(Teachers transfer and recruitment: Minister Nagesh )

Comments are closed.