Education News : ಉಡುಪಿ : ಪ್ರವೇಶ ಪರೀಕ್ಷೆ ಬರೆಯದೇ ವಸತಿ ಶಾಲೆಗಳಲ್ಲಿ 6 ನೇ ತರಗತಿಗೆ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ : Education News : ವಿವಿಧ ಸಮುದಾಯಗಳ ಮಕ್ಕಳಿಗೆ ವಸತಿ ಶಾಲೆಗಳಲ್ಲಿ ಪ್ರವೇಶಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರವೇಶ ಪರೀಕ್ಷೆಯನ್ನು ಬರೆಯದೆಯೇ ವಿದ್ಯಾರ್ಥಿಗಳಿಗೆ 6 ನೇ ತರಗತಿಗೆ ಪ್ರವೇಶಾತಿ ನೀಡಲಾಗುತ್ತಿದೆ. ಪೋಷಕರು ಕೆಳಗಿನ ಸಂಸ್ಥೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಸಫಾಯಿ ಕರ್ಮಚಾರಿ, ಸ್ಮಶಾನ ಕಾರ್ಮಿಕರು, ದೇವದಾಸಿ, ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯಗಳ ಮಕ್ಕಳಿಗೆ 6 ನೇ ತರಗತಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಮೊರಾರ್ಜಿ ದೇಸಾಯಿ, ಇಂದಿರಾಗಾಂಧಿ, ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ನಾರಾಯಣ ಗುರು ವಸತಿ ಶಾಲೆ ಶಾಲೆಗಳಲ್ಲಿ ವಿಶೇಷ ದಾಖಲಾತಿ ಪ್ರಕರಣದಡಿ ಪ್ರವೇಶ ಪರೀಕ್ಷೆ ಬರೆಯದೇ ಇದ್ದರೂ 6 ನೇ ತರಗತಿ ದಾಖಲಾತಿ ಮಾಡಿಕೊಳ್ಳಲಾಗುತ್ತಿದ್ದು, ಜಿಲ್ಲೆಯ ಯಾವುದೇ ವಸತಿ ಶಾಲೆಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ : Education Loan : ಉನ್ನತ ಶಿಕ್ಷಣಕ್ಕಾಗಿ ಸಾಲ ಪಡೆಯುವುದು ಹೇಗೆ? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್

ಇದನ್ನೂ ಓದಿ : CUET UG 2023 Answer Key : CUET UG 2023 ಅಂತಿಮ ಪ್ರಶ್ನೋತ್ತರ ಕೀ ಶೀಘ್ರದಲ್ಲೇ ಬಿಡುಗಡೆ ಸಾಧ್ಯತೆ

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಅಥವಾ ವಿವಿಧ ವಸತಿ ಶಾಲೆಗಳ ಪ್ರಾಂಶುಪಾಲರಾದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆರೂರು ಮೊ.ನಂ: 7022713447, ಮಿಯ್ಯಾರು ಮೊ.ನಂ: 9686898326, ಹೆರಂಜಾರು ಮೊ.ನಂ: 9480461537, ಯಡಾಡಿ ಮತ್ಯಾಡಿ ಮೊ.ನಂ: 9901519126, ಪಟ್ಲ ಹಿರೇಬೆಟ್ಟು ಮೊ.ನಂ: 9164524759 ಹಾಗೂ ಕಳತ್ತೂರು ಮೊ.ನಂ: 9535225409, ನಾರಾಯಣ ಗುರು ವಸತಿ ಶಾಲೆ ಯಡಾಡಿ ಮತ್ಯಾಡಿ ಮೊ.ನಂ: 9901519126, ಡಾ. ಬಿ.ಆರ್ ಅಂಬೇಡ್ಕರ್ ವಸತಿ ಶಾಲೆ ಶಂಕರನಾರಾಯಣ ಮೊ.ನಂ: 6363120177 ಹಾಗೂ ಇಂದಿರಾಗಾAಧಿ ವಸತಿ ಶಾಲೆ ಸಿದ್ಧಾಪುರ ಮೊ.ನಂ: 9482487266 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Education News : Udupi : Admission to Class 6 in residential schools without writing entrance exam: Application invited

Comments are closed.