BC Nagesh : Omicron ಭೀತಿಯಲ್ಲಿ ಶಾಲೆ ಬಂದ್‌ : ಶಿಕ್ಷಣ ಸಚಿವರು ಹೇಳಿದ್ದೇನು ಗೊತ್ತಾ ?

ಬೆಂಗಳೂರು : ಕೊರೊನಾ ಬೆನ್ನಲ್ಲೇ ಇದೀಗ ರೂಪಾಂತರಿ ಓಮಿಕ್ರಾನ್‌ (Omicron) ವೈರಸ್‌ ಭೀತಿ ಎಲ್ಲೆಡೆ ಆವರಿಸುತ್ತಿದೆ. ಜೊತೆಗೆ ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ಕೊರೊನಾ ತೀವ್ರಗತಿಯಲ್ಲಿ ಹರಡಿದ್ರೆ ಶಾಲೆ, ಕಾಲೇಜುಗಳನ್ನು ಬಂದ್‌ ಮಾಡಲಾಗುತ್ತೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಈ ಕುರಿತು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ (BC Nagesh) ಅವರು ಹೇಳಿಕೆ ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸದ್ಯಕ್ಕೆ ಶಾಲೆಗಳನ್ನು ಬಂದ್‌ ಮಾಡುವ ಕುರಿತು ನಿರ್ಧಾರ ಕೈಗೊಂಡಿಲ್ಲ. ಪೋಷಕರು ಯಾವುದೇ ರೀತಿಯಲ್ಲಿಯೂ ಆತಂಕ ಪಡಬಾರದು. ಒಂದೊಮ್ಮೆ ಕೊರೊನಾ ವೈರಸ್‌ ಸೋಂಕಿನ ಪ್ರಕರಣಗಳು ಹೆಚ್ಚಾದ್ರೆ ತಾಂತ್ರಿಕ ಸಲಹಾ ಸಮಿತಿಯ ಸಲಹೆಯನ್ನು ಪಡೆದು ಮುಂದಿನ ನಿರ್ಧಾರವನ್ನು ಕೈಗೊಳ್ಳಲಾಗುತ್ತದೆ ಎಂದಿದ್ದಾರೆ. ಶಾಲೆಗಳಲ್ಲಿ ಕೊರೊನಾ ಸೋಂಕಿನ ಹೆಚ್ಚಳದ ಕುರಿತು ಶಿಕ್ಷಣ ಇಲಾಖೆ ಆರೋಗ್ಯ ಇಲಾಖೆಯ ಜೊತೆಗೆ ಸದಾ ಸಂಪರ್ಕದಲ್ಲಿದ್ದೆ. ರಾಜ್ಯದ ಯಾವುದೇ ಶಾಲಾ – ಕಾಲೇಜುಗಳಲ್ಲಿ ಕೊರೋನಾ ಸೋಂಕು ಗಂಭೀರವಾಗಿ ಹರಡಿಲ್ಲ. ಪೋಷಕರು ಆತಂಕ ಪಡಬಾರದು ಎಂದಿದ್ದಾರೆ.

ರಾಜ್ಯದ ಒಂದೊಂದೆ ಕಡೆಗಳಲ್ಲಿ ಕೊರೊನಾ ವೈರಸ್‌ ಸೋಂಕು ಹೆಚ್ಚಳವಾಗುತ್ತಿದೆ. ಧಾರವಾಡದ ಎಸ್‌ಡಿಎಂ ಕಾಲೇಜಿನಲ್ಲಿ ೩೦೬ ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್‌ ಸೋಂಕು ದೃಢಪಟ್ಟಿದೆ. ಇದರ ಬೆನ್ನಲ್ಲೇ ಇದೀಗ ಹಾಸನದ ಚನ್ನರಾಯಪಟ್ಟಣದ ವಸತಿ ಶಾಲೆಯಲ್ಲಿ ಹದಿಮೂರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಶಾಲೆಗಳನ್ನು ಆರಂಭಿಸುವಾಗಲೇ ಕೊರೊನಾ ಸೋಂಕು ಹೆಚ್ಚಳವಾದ್ರೆ ಶಾಲೆಗಳನ್ನು ಬಂದ್‌ ಮಾಡುವ ಕುರಿತು ತಿಳಿಸಲಾಗಿತ್ತು.

ಇದನ್ನೂ ಓದಿ : ವಿಜ್ಞಾನ, ಗಣಿತ ಪಠ್ಯ ಪೂರ್ಣಕ್ಕೆ ಮಾತ್ರವೇ ಒತ್ತು : ಸಚಿವ ಬಿ.ಸಿ.ನಾಗೇಶ್‌

ಇದನ್ನೂ ಓದಿ : ಶಾಲೆ, ಕಾಲೇಜುಗಳೇ ಕೊರೊನಾ ಹಾಟ್‌ಸ್ಪಾಟ್‌ : ಚನ್ನರಾಯಪಟ್ಟಣದಲ್ಲಿ 13 ಮಕ್ಕಳಿಗೆ ಕೊರೊನಾ

( Omicron fear School close : Education Minister BC Nagesh made this clear )

Comments are closed.