ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ನಡೆಸುವ ಕಾಮನ್ ಎಂಟ್ರ್ಯಾನ್ಸ್ ಟೆಸ್ಟ್ ( Karnataka PGCET 2021) ಪ್ರವೇಶ ಪತ್ರವನ್ನು ಕೆಇಎ ಇದೀಗ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಬಳಸಿ ತಮ್ಮ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
ನವೆಂಬರ್ 13 ಮತ್ತು 14ರಂದು ಪಿಜಿಸಿಇಟಿ ಪ್ರವೇಶ ಪರೀಕ್ಷೆಯು ನಡೆಯಲಿದೆ. ಎಂಬಿಎ / ಎಂಸಿಎ / ಎಂಇ / ಎಂಟೆಕ್ / ಎಂಆರ್ಚ್ ಕೋರ್ಸ್‌ಗಳ ಪ್ರವೇಶಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಾಮಾನ್ಯ ಅರ್ಹತಾ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಪಿಜಿಸಿಇಟಿ ಪರೀಕ್ಷೆಗೆ ರಿಜಿಸ್ಟ್ರೇಷನ್ ಪಡೆದಿರುವ ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

ಈಗಾಗಲೇ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್ “https://cetonline.karnataka.gov.in/kea/‘ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ. ವೆಬ್‌ಸೈಟ್‌ನಲ್ಲಿನ ಹೋಮ್ ಪೇಜ್‌ನಲ್ಲಿ ಪಿಜಿಸಿಇಟಿ ಪ್ರವೇಶ ಪರೀಕ್ಷೆಗೆ ಸಂಬಂಧಿಸಿದ ಲಿಂಕ್ ನೀಡಲಾಗಿದ್ದು, ಈ ಲಿಂಕ್ ಬಳಸಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಬಹುದಾಗಿದೆ. ಕರ್ನಾಟಕ ಸ್ನಾತಕೋತ್ತರ ಪದವಿಗಳ ಪ್ರವೇಶಾತಿ ಸಾಮಾನ್ಯ ಅರ್ಹತಾ ಪರೀಕ್ಷೆಯನ್ನು ಗರಿಷ್ಠ 100 ಅಂಕಗಳಿಗೆ ನಡೆಸಲಾಗುತ್ತದೆ. ಪರೀಕ್ಷೆ ನಡೆದ 3 ದಿನಗಳಲ್ಲಿ ಸರಿಯುತ್ತರಗಳನ್ನು ಬಿಡುಗಡೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಈ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗುತ್ತದೆ.
ಇದನ್ನೂ ಓದಿ : ಎಂಬಿಎ ಪದವೀಧರರಿಂದ ಉದ್ಯೋಗಕ್ಕೆ ಅರ್ಜಿ ಆಹ್ವಾನಿಸಿದ ಟಿಸಿಎಸ್
ಇದನ್ನೂ ಓದಿ : LKG, UKG ಆರಂಭಕ್ಕೆ ಗ್ರೀನ್ ಸಿಗ್ನಲ್ : ನವೆಂಬರ್ 8ರಿಂದ ತರಗತಿ ಆರಂಭ : ಹಿಂದೇಟು ಹಾಕ್ತಿದ್ದಾರೆ ಪೋಷಕರು