ಕರ್ನಾಟಕದಲ್ಲಿ 7000 ಸರ್ಕಾರಿ ಶಾಲೆಗಳು ಬಂದ್ ? ಶಿಕ್ಷಕರು ಅತಂತ್ರ
ಬೆಂಗಳೂರು : ರಾಜ್ಯದಲ್ಲಿ ಗ್ರಾಮ ಪಂಚಾಯತ ವ್ಯಾಪ್ತಿಗೊಂದು ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ನಿರ್ಮಿಸುತ್ತೇವೆ. ಶೈಕ್ಷಣಿಕ ಕ್ಷೇತ್ರದಲ್ಲಿ ಕ್ರಾಂತಿ ತರುತ್ತೇವೆ ಎಂದು ಮೊನ್ನೆ ಮೊನ್ನೆಯಷ್ಟೇ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿದ್ದರು.
ಅದರಂತೆಯೇ ಇದೀಗ ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಹೊಂಗನೂರಿನಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ತೆರೆಯಲಾಗುತ್ತಿದೆ. ಆದರೆ ಇದಕ್ಕೆಂದು ಸುತ್ತಲಿನ 6-7 ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಲಾಗಿದೆ.
ರಾಜ್ಯಾದ್ಯಂತ ರಾಜ್ಯ ಸರ್ಕಾರವು 700 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯುವ ಯೋಚನೆಯಲ್ಲಿದೆ. ಒಂದು ಪಬ್ಲಿಕ್ ಶಾಲೆಗೆ 7 ರಿಂದ 10 ಸರ್ಕಾರಿ ಶಾಲೆಗಳು ವಿಲೀನಗೊಳ್ಳುತ್ತಿದೆ. ಈ ಲೆಕ್ಕಾಚಾರದಲ್ಲಿ ನೋಡಿದರೆ ಮುಂದಿನ ವರ್ಷ ರಾಜ್ಯದಲ್ಲಿ ಬರೋಬ್ಬರಿ 7000 ಸರ್ಕಾರಿ ಶಾಲೆಗಳಿಗೆ ಬೀಗ ಬೀಳುವುದು ಪಕ್ಕಾ ಎನ್ನಲಾಗುತ್ತಿದೆ.
ಪ್ರತಿಯೊಂದು ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ಕಷ್ಟ ಎಂಬ ಉದ್ದೇಶದಿಂದ ಕೆಪಿಎಸ್ಗಳನ್ನು ನಿರ್ಮಿಸಲಾಗುತ್ತಿದೆ. ಕೆಪಿಎಸ್‌ಸಿ ಶಾಲೆಗಳಲ್ಲಿ ಎಲ್ ಕೆಜಿ ಯಿಂದ 12ನೇ ತರಗತಿಯವರೆಗೂ ವ್ಯಾಸಂಗ ಮಾಡಬಹುದಾಗಿದೆ. ಆದರೆ ಇದಕ್ಕಾಗಿ ಸದ್ದಿಲ್ಲದೇ ಸರ್ಕಾರಿ ಶಾಲೆಗಳನ್ನು ಬಂದ್ ಮಾಡಲಾಗುತ್ತಿದೆ.
ಇದನ್ನೂ ಓದಿ: Holiday Complete List: 20260 ರಜಾದಿನಗಳ ಸಂಪೂರ್ಣ ಪಟ್ಟಿ
ರಾಜ್ಯದಲ್ಲಿ ಈಗಾಗಲೇ 307 ಕರ್ನಾಟಕ ಪಬ್ಲಿಕ್ ಶಾಲೆಗಳು ಕಾರ್ಯನಿರ್ವಹಿಸುತ್ತಿದೆ. ಇದಕ್ಕಾಗಿ ಈಗಾಗಲೇ ರಾಜ್ಯದಲ್ಲಿ ಸಹಸ್ರಾರು ಶಾಲೆಗಳು ಸದ್ದಿಲ್ಲದೇ ವಿಲೀನಗೊಂಡಿದೆ. ರಾಜ್ಯದಲ್ಲಿ ಶಿಕ್ಷಕರ ಕೊರತೆಯಿದ್ದರೂ ಸಹ ನೇಮಕಾತಿ ಪ್ರಕ್ರಿಯೆಯನ್ನೂ ಸರ್ಕಾರ ನಡೆಸುತ್ತಿಲ್ಲ.
ಕೆಪಿಎಸ್ ಸ್ಥಾಪನೆಯಿಂದಾಗಿ ಶಿಕ್ಷಕರು ಸಂಕಷ್ಟಕ್ಕೆ ಸಿಲುಕಿದ್ದು ಈ ಬಗ್ಗೆ ರಾಜ್ಯ ಸರ್ಕಾರ ಗಮನಹರಿಸಿ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ. ಒಂದೊಮ್ಮೆ ಸರಕಾರಿ ಶಾಲೆಗಳನ್ನು ಕೆಪಿಎಸ್ ಶಾಲೆಗಳ ಜೊತೆಗೆ ವಿಲೀನ ಮಾಡಿದ್ರೆ ಶಿಕ್ಷಕರ ಸ್ಥಿತಿ ಏನು ಅನ್ನೋ ಕುರಿತು ರಾಜ್ಯ ಸರಕಾರ ಸ್ಪಷ್ಟ ಪಡಿಸಿಲ್ಲ.



