ಕರ್ನಾಟಕದಲ್ಲಿ 7000 ಸರ್ಕಾರಿ ಶಾಲೆಗಳು ಬಂದ್​ ? ಶಿಕ್ಷಕರು ಅತಂತ್ರ

ಬೆಂಗಳೂರು : ರಾಜ್ಯದಲ್ಲಿ ಗ್ರಾಮ ಪಂಚಾಯತ ವ್ಯಾಪ್ತಿಗೊಂದು ಕರ್ನಾಟಕ ಪಬ್ಲಿಕ್​ ಶಾಲೆಗಳನ್ನು ನಿರ್ಮಿಸುತ್ತೇವೆ. ಶೈಕ್ಷಣಿಕ ಕ್ಷೇತ್ರದಲ್ಲಿ ಕ್ರಾಂತಿ ತರುತ್ತೇವೆ ಎಂದು ಮೊನ್ನೆ ಮೊನ್ನೆಯಷ್ಟೇ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿದ್ದರು.

ಅದರಂತೆಯೇ ಇದೀಗ ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಹೊಂಗನೂರಿನಲ್ಲಿ ಕರ್ನಾಟಕ ಪಬ್ಲಿಕ್​ ಸ್ಕೂಲ್​ ತೆರೆಯಲಾಗುತ್ತಿದೆ. ಆದರೆ ಇದಕ್ಕೆಂದು ಸುತ್ತಲಿನ 6-7 ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಲಾಗಿದೆ.

ರಾಜ್ಯಾದ್ಯಂತ ರಾಜ್ಯ ಸರ್ಕಾರವು 700 ಕರ್ನಾಟಕ ಪಬ್ಲಿಕ್​ ಶಾಲೆಗಳನ್ನು ತೆರೆಯುವ ಯೋಚನೆಯಲ್ಲಿದೆ. ಒಂದು ಪಬ್ಲಿಕ್​ ಶಾಲೆಗೆ 7 ರಿಂದ 10 ಸರ್ಕಾರಿ ಶಾಲೆಗಳು ವಿಲೀನಗೊಳ್ಳುತ್ತಿದೆ. ಈ ಲೆಕ್ಕಾಚಾರದಲ್ಲಿ ನೋಡಿದರೆ ಮುಂದಿನ ವರ್ಷ ರಾಜ್ಯದಲ್ಲಿ ಬರೋಬ್ಬರಿ 7000 ಸರ್ಕಾರಿ ಶಾಲೆಗಳಿಗೆ ಬೀಗ ಬೀಳುವುದು ಪಕ್ಕಾ ಎನ್ನಲಾಗುತ್ತಿದೆ.

ಪ್ರತಿಯೊಂದು ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ಕಷ್ಟ ಎಂಬ ಉದ್ದೇಶದಿಂದ ಕೆಪಿಎಸ್​ಗಳನ್ನು ನಿರ್ಮಿಸಲಾಗುತ್ತಿದೆ. ಕೆಪಿಎಸ್‌ಸಿ ಶಾಲೆಗಳಲ್ಲಿ ಎಲ್‌ ಕೆಜಿ ಯಿಂದ 12ನೇ ತರಗತಿಯವರೆಗೂ ವ್ಯಾಸಂಗ ಮಾಡಬಹುದಾಗಿದೆ. ಆದರೆ ಇದಕ್ಕಾಗಿ ಸದ್ದಿಲ್ಲದೇ ಸರ್ಕಾರಿ ಶಾಲೆಗಳನ್ನು ಬಂದ್​ ಮಾಡಲಾಗುತ್ತಿದೆ.

ಇದನ್ನೂ ಓದಿ: Holiday Complete List: 20260 ರಜಾದಿನಗಳ ಸಂಪೂರ್ಣ ಪಟ್ಟಿ

ರಾಜ್ಯದಲ್ಲಿ ಈಗಾಗಲೇ 307 ಕರ್ನಾಟಕ ಪಬ್ಲಿಕ್​ ಶಾಲೆಗಳು ಕಾರ್ಯನಿರ್ವಹಿಸುತ್ತಿದೆ. ಇದಕ್ಕಾಗಿ ಈಗಾಗಲೇ ರಾಜ್ಯದಲ್ಲಿ ಸಹಸ್ರಾರು ಶಾಲೆಗಳು ಸದ್ದಿಲ್ಲದೇ ವಿಲೀನಗೊಂಡಿದೆ. ರಾಜ್ಯದಲ್ಲಿ ಶಿಕ್ಷಕರ ಕೊರತೆಯಿದ್ದರೂ ಸಹ ನೇಮಕಾತಿ ಪ್ರಕ್ರಿಯೆಯನ್ನೂ ಸರ್ಕಾರ ನಡೆಸುತ್ತಿಲ್ಲ.

ಕೆಪಿಎಸ್​ ಸ್ಥಾಪನೆಯಿಂದಾಗಿ ಶಿಕ್ಷಕರು ಸಂಕಷ್ಟಕ್ಕೆ ಸಿಲುಕಿದ್ದು ಈ ಬಗ್ಗೆ ರಾಜ್ಯ ಸರ್ಕಾರ ಗಮನಹರಿಸಿ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ. ಒಂದೊಮ್ಮೆ ಸರಕಾರಿ ಶಾಲೆಗಳನ್ನು ಕೆಪಿಎಸ್‌ ಶಾಲೆಗಳ ಜೊತೆಗೆ ವಿಲೀನ ಮಾಡಿದ್ರೆ ಶಿಕ್ಷಕರ ಸ್ಥಿತಿ ಏನು ಅನ್ನೋ ಕುರಿತು ರಾಜ್ಯ ಸರಕಾರ ಸ್ಪಷ್ಟ ಪಡಿಸಿಲ್ಲ.

Exit mobile version