ದ್ವಿತೀಯ PUC ಪರೀಕ್ಷೆ ಮುಂದೂಡಿಕೆ : ಡಿ.13 ರಿಂದ ರಾಜ್ಯಾದ್ಯಂತ ಏಕಕಕಾಲದಲ್ಲಿ ಪರೀಕ್ಷೆ

ಬೆಂಗಳೂರು : ರಾಜ್ಯದಲ್ಲಿ ನವೆಂಬರ್‌ 29 ರಿಂದ ನಡೆಸಲು ಉದ್ದೇಶಿಸಿದ್ದ ದ್ವಿತೀಯ ಪಿಯುಸಿ (PUC) ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಅಲ್ಲದೇ ಈ ಬಾರಿ ರಾಜ್ಯದಾದ್ಯಂತ ಏಕ ಕಾಲದಲ್ಲಿ ಪರೀಕ್ಷೆ ನಡೆಸಲು ಇಲಾಖೆ ಮುಂದಾಗಿದೆ. ಹೀಗಾಗಿ ಏಕರೂಪದ ಪ್ರಶ್ನೆ ಪತ್ರಿಕೆ ನೀಡುವ ಸಾಧ್ಯತೆಯಿದೆ.

ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ತಡವಾಗಿ ಆರಂಭಗೊಂಡಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆ ಪಠ್ಯವನ್ನು ಮುಗಿಸಲು ತರಾತುರಿಯಲ್ಲಿದೆ. ಅದ್ರಲ್ಲೂ ನವೆಂಬರ್‌ 29 ರಿಂದ ದ್ವಿತೀಯ ಪಿಯುಸಿ ಮಧ್ಯ ವಾರ್ಷಿಕ ಪರೀಕ್ಷೆಗಳನ್ನು ನಡೆಸಲು ಉದ್ದೇಶಿಸಲಾಗಿತ್ತು. ಆದರೆ ಕೆಲವು ಕಡೆಗಳಲ್ಲಿ ಪಠ್ಯಗಳನ್ನು ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಜೊತೆಗೆ ಮಧ್ಯ ವಾರ್ಷಿಕ ಪರೀಕ್ಷೆ ನಡೆಸಿದ ನಂತರದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ್ರೆ ಏನು ಮಾಡುವುದು ಅನ್ನೋ ಚಿಂತೆ ಕಾಡಿತ್ತು. ಹಿನ್ನೆಲೆಯಲ್ಲಿ ಪರೀಕ್ಷೆಯನ್ನೇ ಮುಂದೂಡುವಂತೆ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಬೇಡಿಕೆಯನ್ನು ಮುಂದಿಟ್ಟಿದ್ದಾರೆ.

ಈ ಬಾರಿ ದ್ವಿಯೀಯ ಪಿಯುಸಿ ಪರೀಕ್ಷೆ ಡಿಸೆಂಬರ್‌ 13 ರಿಂದ 24ರ ವರೆಗೆ ನಡೆಯಲಿದೆ. ಒಂದೊಮ್ಮೆ ಕೊರೊನಾ ಮೂರನೇ ಅಲೆ ರಾಜ್ಯದಲ್ಲಿ ಆರ್ಭಟಿಸಿ ಅಂತಿಮ ಪರೀಕ್ಷೆ ನಡೆಸಲು ಕಷ್ಟಸಾಧ್ಯವಾದ್ರೆ ಏನು ಮಾಡುವುದು ಅನ್ನೋ ಚಿಂತೆ ಕಾಡುತ್ತಿದೆ. ಇದೇ ಕಾರಣಕ್ಕೆ ಪದವಿ ಪೂರ್ವ ಶಿಕ್ಷಣ ಇಲಾಖೆ ಏಕಕಾಲದಲ್ಲಿ ರಾಜ್ಯದಾದ್ಯಂತ ಪರೀಕ್ಷೆಯನ್ನು ನಡೆಸಲು ಮುಂದಾಗಿದೆ. ಒಂದೊಮ್ಮೆ ಕೊರೊನಾ ಸೋಂಕು ಕಾಣಿಸಿಕೊಂಡ್ರೆ ಮಧ್ಯ ವಾರ್ಷಿಕ ಪರೀಕ್ಷೆಯ ಅಂಕವನ್ನೇ ಪರಿಗಣಿಸುವ ಸಾಧ್ಯತೆಯೂ ಇದೆ. ಹೀಗಾಗಿ ಈ ಬಾರಿ ಮಧ್ಯ ವಾರ್ಷಿಕ ಪರೀಕ್ಷೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಹೆಚ್ಚು ಮಹತ್ವವನ್ನು ಪಡೆದುಕೊಂಡಿದೆ.

ಇದನ್ನೂ ಓದಿ : School Fees : ಶೇ.15 ರಷ್ಟು ಬೋಧನಾ ಶುಲ್ಕ ವಾಪಾಸ್‌ ಮಾಡಿ : ಖಾಸಗಿ ಶಾಲೆಗಳಿಗೆ ರಾಜ್ಯ ಸರಕಾರದ ಆದೇಶ

ಇದನ್ನೂ ಓದಿ : Children’s Day : ಮಕ್ಕಳಿಗಾಗಿ ನರ್ತಿಸಿದ ಶಿಕ್ಷಕರು : ಹೀಗೊಂದು ವಿಶಿಷ್ಟ ಮಕ್ಕಳ ದಿನಾಚರಣೆ

(PUC Board Postpone Second puc Middle term exms)

Comments are closed.