ಬೆಂಗಳೂರು : ಪ್ರಥಮ ಪಿಯುಸಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಪದವಿ ಪೂರ್ವಶಿಕ್ಷಣ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣವಾದ ವಿದ್ಯಾರ್ಥಿಗಳಿಗೆ ಪಾಸ್ ಮಾಡುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಅನುತ್ತೀರ್ಣ ವಿದ್ಯಾರ್ಥಿಗಳು ಅ.20 ರೊಳಗೆ ಕಾಲೇಜು ಹಂತದಲ್ಲೇ ಪೂರಕ ಪರೀಕ್ಷೆ ನಡೆಸಬೇಕು. ಪರೀಕ್ಷೆಯಲ್ಲಿ ಉತ್ತೀರ್ಣಕ್ಕೆ ಬೇಕಾದ ಗರಿಷ್ಠ ಅಂಕ ನೀಡಿ ಮುಂದಿನ ಶಿಕ್ಷಣಕ್ಕೆ ಅವಕಾಶ ಕಲ್ಪಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಈ ಕುರಿತು ಶಿಕ್ಷಣ ಇಲಾಖೆಯ ಎಲ್ಲಾ ಉಪ ನಿರ್ದೇಶಕರು ಕಾಲೇಜುಗಳ ಪ್ರಾಂಶುಪಾಲರಿಗೆ ಸುತ್ತೋಲೆ ಹೊರಡಿಸಿದ್ದಾರೆ. ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗೆ ಗೈರು ಹಾಜರಾಗಿದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಲು ಅವಕಾಶ ಕಲ್ಪಿಸಲಾಗಿತ್ತು.

ಜುಲೈ 13ಕ್ಕೂ ಮೊದಲು ಹೊರಡಿಸಿದ ಸುತ್ತೋಲೆಯಂತೆ ಪೂರಕ ಪರೀಕ್ಷೆಗೆ ಶುಲ್ಕವನ್ನು ಪಾವತಿಸಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಅ. 20ರೊಳಗೆ ಕಾಲೇಜು ಹಂತದಲ್ಲಿ ಪೂರಕ ಪರೀಕ್ಷೆಯನ್ನು ನಡೆಸಿ ಫಲಿತಾಂಶದಲ್ಲಿ ಅವರು ಗಳಿಸಿದ ಅಂಕವನ್ನು ಪರಿಗಣಿಸಬೇಕು.

ಅಲ್ಲದೇ ಅನುತೀರ್ಣರಾದವರಿಗೆ ಅಗತ್ಯ ಅಂಕವನ್ನು ನೀಡಿ ಪಾಸ್ ಮಾಡಬೇಕೆಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸೂಚನೆಯನ್ನು ನೀಡಿದ್ದಾರೆ.