ಬೆಂಗಳೂರು : ಕೊರೊನಾ ಸಂಕಷ್ಟದ ನಡುವಲ್ಲೇ ಕಳೆದೈದು ತಿಂಗಳುನಿಂದಲೂ ವೇತನ ಸಿಗದೆ ಸಂಕಷ್ಟಕ್ಕೆ ಸಿಲುಕಿದ್ದ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರಕಾರ ಗುಡ್ ನ್ಯೂಸ್ ಕೊಟ್ಟಿದೆ.

ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಅತಿಥಿ ಉಪನ್ಯಾಸಕರ 5 ತಿಂಗಳ ಬಾಕಿ ವೇತನ ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಕಳೆದೈದು ತಿಂಗಳಿಂದ ಬಾಕಿ ಉಳಿದಿದ್ದ ಗೌರವಧನ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.
ಕಳೆದ ಕೆಲ ತಿಂಗಳಿನಿಂದ ಸಂಕಷ್ಟಕ್ಕೆ ಸಿಲುಕಿದ್ದ ಉಪನ್ಯಾಸಕರಿಗೆ ಸರಕಾರ ನಿರ್ಧಾರದಿಂದ ಕೊಂಚ ರಿಲೀಫ್ ಸಿಕ್ಕಂತಾಗಿದೆ.
