ಗುಡ್ ನ್ಯೂಸ್ : ಶಿಕ್ಷಕರ ಹುದ್ದೆಯ ನೇಮಕಾತಿಗೆ ಸೂಚನೆ

ಬೆಂಗಳೂರು : ಶಿಕ್ಷಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಖಾಲಿ ಇರುವ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಸೂಚಿಸಿದ್ದಾರೆ. ಆದ್ಯತೆ ಮೇರೆಗೆ ಕಲ್ಯಾಣ ಕರ್ನಾಟಕ ಪ್ರದೇಶದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯಲ್ಲಿ ಖಾಲಿ ಉಳಿದ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಶಿಕ್ಷಕರ ಅರ್ಹತಾ ಪರೀಕ್ಷೆ ಇತ್ತೀಚೆಗಷ್ಟೇ ನಡೆದಿದ್ದು, ವೃಂದ ನೇಮಕಾತಿ ನಿಯಮಗಳ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಹುದ್ದೆಗಳು ಖಾಲಿ ಇದ್ದು, ನೇಮಕಾತಿ ಪ್ರಕ್ರಿಯೆ ಆರಂಭಿಸಲು ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.

Comments are closed.