PUC : ಪಿಯುಸಿಯಲ್ಲಿ ಫೇಲ್ ಆದವರಿಗೂ ಗುಡ್ ನ್ಯೂಸ್ : ಪರೀಕ್ಷೆ ಇಲ್ಲದೇ ವಿದ್ಯಾರ್ಥಿಗಳು ಪಾಸ್..!!

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಇದೀಗ ಅನುತೀರ್ಣಗೊಂಡ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಪರೀಕ್ಷೆ ಇಲ್ಲದೆ ದ್ವಿತೀಯ ಪಿಯುಸಿ ರಿಪೀಟರ್ಸ್ ಪಾಸ್ ಮಾಡಲು ತಜ್ಞರ ಸಮಿತಿ ಶಿಫಾರಸು ಮಾಡಿದೆ.

ಈ‌ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿದ್ದು, ಎಲ್ಲಾ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡಲು ನಿರ್ಧರಿಸಲಾಗಿದೆ. ಆದರೆ, ಪುನರಾವರ್ತಿತ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಈ ಕುರಿತು ರಿಪೀಟರ್ಸ್ ವಿದ್ಯಾರ್ಥಿಗಳು ಹೈಕೋರ್ಟ್ ಮೊರೆ ಹೋಗಿದ್ದರು. ನ್ಯಾಯಾಲಯ ಕೂಡ ಸರಕಾರದ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿತ್ತು.

ಈ ನಿಟ್ಟಿನಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ರಚಿಸಿದ್ದ ತಜ್ಞರ ಸಮಿತಿ, ಫ್ರೆಶರ್ಸ್ ವಿದ್ಯಾರ್ಥಿಗಳ ರೀತಿಯಲ್ಲಿ ಪುನರಾವರ್ತಿತ ವಿದ್ಯಾರ್ಥಿ ಗಳಿಗೂ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸ ಬೇಕೆಂದು ತಜ್ಞರ  ಸಮಿತಿ ವರದಿಯನ್ನು ನೀಡಿದ್ದು ಇದೇ ವರದಿಯನ್ನು ಸರ್ಕಾರ ಹೈಕೋರ್ಟ್ ಗೆ ಸಲ್ಲಿಕೆ ಮಾಡಲು ಮುಂದಾಗಿದೆ.

ನ್ಯಾಯಾಲಯ ಒಪ್ಪಿಗೆ ಸೂಚಿಸಿದ್ರೆ  ಸುಮಾರು ಒಂದು ಲಕ್ಷದಷ್ಟು ಪುನರಾವರ್ತಿತ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆ ದ್ವಿತೀಯ ಪಿಯುಸಿ ಪಾಸಾಗುವ ಅವಕಾಶ ಸಿಗಲಿದೆ.

Comments are closed.