ಬೆಂಗಳೂರು : 2021 -22 ನೇ ಸಾಲಿನಲ್ಲಿ ನಿಗದಿತ ಖಾಸಗಿ ಶಾಲೆಗಳಲ್ಲಿ ಲಭ್ಯವಿರುವ ಶೇಕಡ 25 ರಷ್ಟು ಆರ್.ಟಿ.ಇ. ಮೀಸಲಾತಿ ಸೀಟುಗಳ ಪ್ರವೇಶ ಶಿಕ್ಷಣ ಇಲಾಖೆ ಅರ್ಜಿಗಳನ್ನು ಆಹ್ವಾನಿಸಿದೆ.
ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷ ವಿಳಂಭವಾಗಿತ್ತು. ಆದರೆ ಮುಂದಿನ ವರ್ಷ ಸಮಯ ಸರಿದೂಗಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದೆ. ಇಜ ಹಿನ್ನೆಲೆಯಲ್ಲಿ ಮಾರ್ಚ್ 8 ರಿಂದ ರಾಜ್ಯದಲ್ಲಿ ಶಿಕ್ಷಣ ಹಕ್ಕು ಕಾಯ್ದೆ(RTE)ಯಡಿ ಸೀಟುಗಳಿಗೆ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಏಪ್ರಿಲ್ 8 ರವರೆಗೆ ಅರ್ಜಿಗಳನ್ನು ಸಲ್ಲಿಸಬಗುದಾಗಿದೆ.
ಹೆಚ್ಚಿನ ಮಾಹಿತಿಗಾಗಿ: http://school education.kar.nic.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.