Kannada News Next

education

ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌ : ಇಂಜಿನಿಯರ್‌, ಮೆಡಿಕಲ್‌ ಸೀಟ್‌ನಲ್ಲಿ ಶೇ.7.5 ಮೀಸಲಾತಿ

ಈ ಹೊಸ ವ್ಯವಸ್ಥೆಯು ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶಿಸಲಾಗಿದೆ. ಇದರಿಂದ ಅರ್ಹ ಅಭ್ಯರ್ಥಿಗಳಿಗೆ ಯಾವುದೇ ಅನ್ಯಾಯವಾಗದಂತೆ ಸಾರಿಗೆ ಹಾಗೂ ಶಿಕ್ಷಣ ಇಲಾಖೆಗಳು ಎಚ್ಚರಿಕೆ ವಹಿಸಿವೆ.

By ರಶ್ಮಿ ಎಸ್. | Rashmi S
govt school students reservation engineering medical seats

ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣ ಭಾಗದ ಮತ್ತು ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗುವ ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಅಧಿಕೃತವಾಗಿ ಪ್ರಕಟಿಸಿದೆ.

ಹಳ್ಳಿಗಳ ಸರ್ಕಾರಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಓದಿದ ಪ್ರತಿಭಾವಂತ ಯುವಜನರಿಗೆ ಉನ್ನತ ಮತ್ತು ವೃತ್ತಿಪರ ಶಿಕ್ಷಣದ ಹಾದಿಯನ್ನು ಸುಲಭಗೊಳಿಸಲು ಆಡಳಿತ ಮಂಡಳಿಯು ಹೊಸ ನಿಯಮಾವಳಿಗಳ ಅಧಿಕೃತ ಗಜೆಟ್ ಪ್ರಕಟಣೆಯನ್ನು ಹೊರಡಿಸಿದೆ.

ಇದರ ಅನ್ವಯ, ಇನ್ಮುಂದೆ ಇಂಜಿನಿಯರಿಂಗ್ ಅಥವಾ ವೈದ್ಯಕೀಯದಂತಹ ಉನ್ನತ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಯ ಸೀಟು ಹಂಚಿಕೆಯಲ್ಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆ ಸಿಗಲಿದೆ. ಇದು ಶೈಕ್ಷಣಿಕ ಕ್ಷೇತ್ರದಲ್ಲಿ ಸಮಾನತೆ ತರಲು ಸಹಕಾರಿಯಾಗಲಿದೆ.

ಈ ನೂತನ ತಿದ್ದುಪಡಿ ನಿಯಮಗಳ ಅಡಿಯಲ್ಲಿ, ಪ್ರಸ್ತುತ ಜಾರಿಯಲ್ಲಿರುವ ಒಟ್ಟು ಶೇಕಡಾ ಹದಿನೈದರಷ್ಟು ಗ್ರಾಮೀಣ ಕೋಟಾವನ್ನು ಎರಡು ಸಮಾನ ಭಾಗಗಳಾಗಿ ವಿಂಗಡಿಸಲಾಗಿದೆ. ಅದರಲ್ಲಿ ಶೇಕಡಾ 7.5 ರಷ್ಟು ಸೀಟುಗಳನ್ನು ಸಂಪೂರ್ಣವಾಗಿ ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಒಂದನೇ ತರಗತಿಯಿಂದ ಹತ್ತನೇ ತರಗತಿಯವರೆಗೆ ಸತತವಾಗಿ ವಿದ್ಯಾಭ್ಯಾಸ ಮುಗಿಸಿದ ವಿದ್ಯಾರ್ಥಿಗಳಿಗೆ ಮಾತ್ರ ಸಮತಳ ಮೀಸಲಾತಿಯ ರೂಪದಲ್ಲಿ ಕಾಯ್ದಿರಿಸಲಾಗುತ್ತದೆ.

ರಾಜ್ಯ ಸರಕಾರ ಈ ನಿರ್ಧಾರದಿಂದ ಹಳ್ಳಿಗಳ ಬಡ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಈ ಹಿಂದೆ ಇದ್ದ ಎಲ್ಲಾ ಅಡೆತಡೆಗಳು ನಿವಾರಣೆ ಆಗಲಿದೆ. ಉಳಿಕೆಯ ಶೇಕಡಾ 7.5ರಷ್ಟು ಮೀಸಲಾತಿಯನ್ನು ಹಳ್ಳಿಗಳಲ್ಲಿರುವ ಮಾನ್ಯತೆ ಪಡೆದ ಖಾಸಗಿ ಅಥವಾ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ಓದಿದ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಲು ನಿರ್ಧಾರ ಮಾಡಲಾಗಿದೆ.

ಈ ಹೊಸ ವ್ಯವಸ್ಥೆಯು ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶಿಸಲಾಗಿದೆ. ಇದರಿಂದ ಅರ್ಹ ಅಭ್ಯರ್ಥಿಗಳಿಗೆ ಯಾವುದೇ ಅನ್ಯಾಯವಾಗದಂತೆ ಸಾರಿಗೆ ಹಾಗೂ ಶಿಕ್ಷಣ ಇಲಾಖೆಗಳು ಎಚ್ಚರಿಕೆ ವಹಿಸಿವೆ.

ರಾಜ್ಯ ಸರಕಾ ಕೈಗೊಂಡಿರುವ ಮಹತ್ವದ ನಿರ್ಧಾರದಿಂದಾಗಿ ಆರ್ಥಿಕವಾಗಿ ಹಿಂದುಳಿದ, ಸೂಕ್ತ ಸೌಲಭ್ಯಗಳೇ ಇಲ್ಲದೇ ಕೇವಲ ಸರಕಾರಿ ಶಾಲೆಗಳನ್ನೇ ಆಶ್ರಯಿಸಿರುವ ಬಡ ಕುಟುಂಬದ ಮಕ್ಕಳಿಗೆ ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿ ಸುಲಭವಾಗಿ ಸೀಟುಗಳು ಸಿಗಲಿದೆ. ಖಾಸಗಿ ಶಾಲೆಗಳ ಜೊತೆಗೆ ಸ್ಪರ್ಧೆ ಮಾಡೋದಕ್ಕೆ ಸಾಧ್ಯವಾದ ಗ್ರಾಮೀಣ ಪ್ರತಿಭೆಗಳಿಗೆ ದೊಡ್ಡ ಆಸರಯಾಗಲಿದ್ದು, ಸಾಮಾಜಿಕ ಸಮಾನತೆಯನ್ನು ತರಲು ಸಹಕಾರಿಯಾಗಲಿದೆ.

ಉನ್ನತ ಶಿಕ್ಷಣದಲ್ಲಿ ಗ್ರಾಮೀಣ ಯುವಕರ ಪ್ರಾತಿನಿಧ್ಯ ಹೆಚ್ಚಿಸಲು ಮತ್ತು ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಈ ನೀತಿಯು ದಾರಿದೀಪವಾಗಲಿದೆ ಎನ್ನಬಹುದು. ಇದರಿಂದ ಸರ್ಕಾರಿ ಶಾಲಾ ಶಿಕ್ಷಣದ ಮೇಲಿನ ನಂಬಿಕೆ ಇನ್ನಷ್ಟು ಹೆಚ್ಚಾಗಲಿದೆ ಮತ್ತು ಬಡ ಪೋಷಕರಿಗೆ ಹೆಮ್ಮೆಯ ವಿಷಯವಾಗಲಿದೆ.

ಮುಂದಿನ ದಿನಗಳಲ್ಲಿ ಈ ನಿಯಮವು ಗ್ರಾಮೀಣ ಭಾಗದ ಶೈಕ್ಷಣಿಕ ವ್ಯವಸ್ಥೆಯಲ್ಲಿ ಒಂದು ಹೊಸ ಮೈಲಿಗಲ್ಲಾಗಲಿದೆ ಎಂಬ ಆಶಾಭಾವನೆ ರಾಜ್ಯಾದ್ಯಂತ ವ್ಯಕ್ತವಾಗಿದೆ. ವಿದ್ಯಾರ್ಥಿ ಸಮಹಕ್ಕೆ ಇದು ಅತ್ಯುತ್ತಮ ಕೊಡುಗೆಯಾಗಿದೆ. ಈ ನಿರ್ಧಾರವನ್ನು ಎಲ್ಲೆಡೆ ಮುಕ್ತವಾಗಿ ಸ್ವಾಗತಿಸಲಾಗಿದೆ.