10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ : ಈ ವರ್ಷವೂ ಕೃಪಾಂಕ ನೀಡಲು ನಿರ್ಧಾರ

ಬೆಂಗಳೂರು: (Grace mark) ಈ ಭಾರಿ ಎಸ್‌ ಎಸ್‌ ಎಲ್‌ ಸಿ ಹಾಗೂ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿ ಸುದ್ದಿ ನೀಡಿದ್ದು, ಪರೀಕ್ಷೆಯಲ್ಲಿ ಒಟ್ಟಾರೆಯಾಗಿ ಕನಿಷ್ಠ ಅಂಕಗಳನ್ನು ಗಳಿಸುವ ವಿದ್ಯಾರ್ಥಿಗಳಿಗೆ ಕೃಪಾಂಕವನ್ನು ನೀಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಎಸ್‌ ಎಸ್‌ ಎಲ್‌ ಸಿ ವಿದ್ಯಾರ್ಥಿಗಳಿಗೆ ಶೇ. 10 ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶೇ. 5 ಕೃಪಾಂಕಗಳನ್ನು ಈ ವರ್ಷವೂ ನೀಡಲು ಕರ್ನಾಟಕ ಶಾಲಾ ಪರೀಕ್ಚಾ ಮತ್ತು ಮೌಲ್ಯಮಾಪನಾ ಮಂಡಳಿ ನಿರ್ಣಯಿಸಿದೆ ಎಂದು ತಿಳಿದುಬಂದಿದೆ.

ಕೊರೊನಾ ಕಾರಣದಿಂದಾಗಿ 2020 ರಲ್ಲಿ ಪರೀಕ್ಷೆ ನಡೆಸಲು ಸಾಧ್ಯವಾಗಿರಲಿಲ್ಲ. 2021 ರಲ್ಲಿ ಎಲ್ಲರನ್ನೂ ಪಾಸ್‌ ಮಾಡಲಾಗಿತ್ತು, ಇದಲ್ಲದೇ 2022 ರಲ್ಲಿ ಶೇ. 10 ಕೃಪಾಂಕ ನೀಡಲಾಗಿತ್ತು. ಇದಲ್ಲದೇ ಕೊರೊನಾ ಸಮಯದಲ್ಲಿ ಕಲಿಕೆ ಮೇಲೆ ವಿದ್ಯಾರ್ಥಿಗಳಿಗೆ ಉಂಟಾಗಿರುವ ಪರಿಣಾಮದಿಂದ ಮಕ್ಕಳು ಇನ್ನೂ ಕೂಡ ಚೇತರಿಸಿಕೊಂಡಿಲ್ಲ. ಈ ಕಾರಣದಿಂದ 2023 ರಲ್ಲಿಯೂ ಕೃಪಾಂಕ ನೀಡಲು ನಿರ್ಧರಿಸಲಾಗಿದೆ. 2019 ರ ವರೆಗೆ ಶೇ. 5 ಕೃಪಾಂಕಗಳನ್ನು ಮಾತ್ರ ನೀಡಲಾಗುತ್ತಿತ್ತು. ಆದರೆ ನಂತರದಲ್ಲಿ ಕೊರೊನಾ ಎನ್ನುವ ಮಹಾಮಾರಿ ಮಕ್ಕಳ ವಿದ್ಯಾಭ್ಯಾಸದ ಮೇಲೆ ಪರಿಣಾಮ ಬೀರಿದ ಕಾರಣ ಶೇ. 10 ರಷ್ಟು ಕೃಪಾಂಕಗಳನ್ನು ನೀಡಲಾಗುತ್ತಿದೆ ಎಂದು ಮಂಡಳಿಯ ಮೂಲಗಳು ತಿಳಿಸಿವೆ.

ಎಸ್‌ ಎಸ್‌ ಎಲ್‌ ಸಿ ಯಲ್ಲಿ ಆರು ವಿಷಯಗಳ ಪೈಕಿ ಮೂರು ವಿಷಯಗಳಲ್ಲಿ ಉತ್ತೀರ್ಣರಾದರೆ, ಉಳಿದ ಮೂರು ವಿಷಯಗಳಿಗೆ ಕನಿಷ್ಠ 1 ರಿಂದ ಗರಿಷ್ಠ 26 ಅಂಕಗಳವರೆಗೆ ಕೃಪಾಂಕ ದೊರೆಯಲಿದೆ. ಆದರೆ 625 ಕ್ಕೆ ಅಂಕಗಳಿಗೆ ಕನಿಷ್ಠ 219 ಅಂಕ ಪಡೆಯಲು ಬೇಕಾಗುವ ಅಂಕಗಳನ್ನು ನೀಡಲಿದೆ.

ಇದನ್ನೂ ಓದಿ : Annual Examination timetable: 5 ಮತ್ತು 8 ನೇ ತರಗತಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಇದನ್ನೂ ಓದಿ : “E Guru” training: ಕುಂದಾಪುರ: ಪಿಯು ವಿದ್ಯಾರ್ಥಿಗಳಿಗೆ “ಇ ಗುರು” ತರಬೇತಿ

100 ಅಂಕಗಳ ಪರೀಕ್ಷೆಯಲ್ಲಿ 20 ಅಂಕಗಳಿಗೆ ಮೌಖಿಕ ಮತ್ತು 80 ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. 80 ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಇದರಲ್ಲಿ 80 ಅಂಕಗಳಿಗೆ ಕನಿಷ್ಠ 28 ಅಂಕಗಳನ್ನು ಪಡೆದಿರಬೇಕು. ಆದರೆ ಕೆಲವು ವಿದ್ಯಾರ್ಥಿಗಳು ಕೆಲವು ವಿಷಯಗಳಲ್ಲಿ ಹೆಚ್ಚಿನ ಅಂಕಗಳನ್ನು ಪಡೆದು ಕೆಲವು ವಿಷಯಗಳಲ್ಲಿ ಕಡಿಮೆ ಅಂಕಗಳನ್ನು ಪಡೆದಿರುತ್ತಾರೆ. ಹೀಗಾಗಿ ಸರಕಾರಿ ಶಾಲೆ ಮಕ್ಕಳು ಹಾಗೂ ಕನ್ನಡ ಮಾಧ್ಯಮ ಮಕ್ಕಳು ಹಿಂದಿ, ಇಂಗ್ಲೀಷ್‌ ನಲ್ಲಿ ಹಿಂದುಳಿದಿರುತ್ತಾರೆ. ಈ ಕಾರಣಕ್ಕೆ ಮಕ್ಕಳ ಮುಂದಿನ ವಿದ್ಯಾಭ್ಯಾಸಕ್ಕೆ ಅಂಕಗಳು ಪರಿಣಾಮ ಬೀರಬಾರದು ಎನ್ನುವುದಕ್ಕಾಗಿ ಇಲಾಖೆ ಈ ನಿರ್ಧಾರವನ್ನು ಕೈಗೊಂಡಿದೆ.

Grace mark: Good news for 10th and 12th class students: Decision to give grace mark this year also

Comments are closed.