VTU ಪರೀಕ್ಷೆ ನಡೆಸಲು ಗ್ರೀನ್ ಸಿಗ್ನಲ್ : ರೂಲ್ಸ್ ಬ್ರೇಕ್ ಮಾಡಿದ ರಾಜ್ಯ ಸರಕಾರ..!!!

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಶಾಲೆ, ಕಾಲೇಜುಗಳನ್ನು ಒಂದು ವಾರ ಬಂದ್ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಆದರೆ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯಕ್ಕೆ ಇಂಜಿನಿಯರಿಂಗ್ ಪರೀಕ್ಷೆ ನಡೆಸಲು ಗ್ರೀನ್ ಸಿಗ್ನಲ್ ನೀಡುವ ಮೂಲಕ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.

ರಾಜ್ಯದ ವಿವಿಧ ವಿಶ್ವವಿದ್ಯಾನಿಲಯಗಳು ಈಗಾಗಲೇ ಪರೀಕ್ಷೆಯನ್ನು ಮುಂದೂಡಿಕೆ ಮಾಡಿವೆ. ಯುಪಿಎಸ್ಇ, ಯುಜಿಸಿ ನೆಟ್ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಆದರೆ ವಿಟಿಯುಗೆ ಪರೀಕ್ಷೆ ನಡೆಸಲು ಸರಕಾರವೇ ಅವಕಾಶ ಕಲ್ಪಿಸಿದೆ. ಎಪ್ರಿಲ್ 19ರಿಂದ ಪರೀಕ್ಷೆಗಳು ಆರಂಭಗೊಂಡಿದ್ದು ಶನಿವಾರ ಹಾಗೂ ಭಾನುವಾರ ಹೊರತು ಪಡಿಸಿ ಉಳಿದ ದಿನಗಳಂದು ಪರೀಕ್ಷೆ ನಡೆಯಲಿದೆ ಎಂದು ಕುಲಪತಿ ಡಾ.ಕರಿಸಿದಪ್ಪ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ರಾಜ್ಯ ಸರಕಾರ ಕೊರೊನಾ ವೈರಸ್ ಸೋಂಕಿನ ನಿಯಂತ್ರಣಕ್ಕೆ ಒಂದೆಡೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರುವುದಾಗಿ ಮಾರ್ಗಸೂಚಿಯನ್ನು ಹೊರಡಿಸಿದೆ. ಇನ್ನೊಂದೆಡೆ ಪರೀಕ್ಷೆ ನಡೆಸಲು ಅವಕಾಶ ನೀಡುವ ಮೂಲಕ ತಾನೇ ನಿಯಮವನ್ನು ಉಲ್ಲಂಘಿಸಿದೆ. ಈ ಕುರಿತು ಸಾರ್ವಜನಿಕ ವಲಯದಲ್ಲಿ ಬಾರೀ ಚರ್ಚೆ ನಡೆಯುತ್ತಿದ್ದು, ಸರಕಾರದ ಕ್ರಮಕ್ಕೆ ಆಕ್ರೋಶ ವ್ಯಕ್ತವಾಗಿದೆ.

Comments are closed.