ನವದೆಹಲಿ : ದೇಶದಾದ್ಯಂತ ಕೊರೊನಾ ಮಹಾಮಾರಿಯ ಆರ್ಭಟ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪದವಿ ತರಗತಿಗಳ ಅಂತಿಮ ವರ್ಷದ ಪರೀಕ್ಷೆ ರದ್ದಾಗುವ ಸಾಧ್ಯತೆಯಿದೆ. ಈ ಕುರಿತು ಹರಿಯಾಣ ವಿಶ್ವವಿದ್ಯಾಲಯ ಯೂನಿವರ್ಸಿಟಿ ಗ್ರ್ಯಾಂಟ್ ಕಮಿಷನ್ (ಯುಜಿಸಿ) ಗೆ ಮನವಿ ಮಾಡಿದೆ.

ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಯುಜಿಸಿ ಈಗಾಗಲೇ ಪದವಿ ಕಾಲೇಜುಗಳ ಪ್ರಥಮ ಹಾಗೂ ದ್ವಿತೀಯ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನೇ ರದ್ದು ಮಾಡಿತ್ತು. ಆದರೆ ಅಂತಿಮ ವರ್ಷದ ಪದವಿ ಪರೀಕ್ಷೆಯನ್ನು ನಡೆಸುವುದಾಗಿ ಹೇಳಿತ್ತು. ಆದ್ರೀಗ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸದ್ಯಕ್ಕೆ ಕಾಲೇಜುಗಳನ್ನು ಆರಂಭವುದು ಕೂಡ ಅಸಾಧ್ಯ.

ಈ ಹಿನ್ನೆಲೆಯಲ್ಲಿ ಹರಿಯಾಣ ವಿಶ್ವವಿದ್ಯಾಲಯ ಸ್ನಾತಕೋತ್ತರ ಪದವಿ ಹಾಗೂ ಪದವಿ ತರಗತಿಯ ವಿದ್ಯಾರ್ಥಿಗಳ ಅಂತಿಮ ವರ್ಷದ ಪರೀಕ್ಷೆಯನ್ನು ರದ್ದು ಮಾಡುವಂತೆ ಯುಜಿಸಿಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಅಲ್ಲದೇ ಇಂದಿನ ಪರಿಸ್ಥಿತಿಯಲ್ಲಿ ಅಕ್ಟೋಬರ್ ವರೆಗೂ ಕಾಲೇಜುಗಳು ತೆರೆಯುವುದು ಅಸಾಧ್ಯ. ಈ ಹಿನ್ನೆಲೆಯಲ್ಲಿ ಹಿಂದಿನ ವರ್ಷದ ಪರೀಕ್ಷೆಯ ಫಲಿತಾಂಶವನ್ನು ಆಧರಿಸಿ ಅಂತಿಮ ವರ್ಷದ ಫಲಿತಾಂಶವನ್ನು ಪ್ರಕಟಿಸುವಂತೆ ಶಿಫಾರಸ್ಸು ಮಾಡಿದೆ.

ಈ ಕುರಿತು ಯೂನಿರ್ವಸಿಟಿ ಗ್ರ್ಯಾಂಟ್ ಕಮಿಷನ್ ಮುಂದಿನ ವಾರವೇ ತನ್ನ ತೀರ್ಪನ್ನು ಪ್ರಕಟಿಸುವ ಸಾಧ್ಯತೆಯಿದೆ. ಸ್ನಾತಕೋತ್ತರ ಹಾಗೂ ಪದವಿ ತರಗತಿಗಳ ಪರೀಕ್ಷೆ ರದ್ದಾದ್ರೆ ಕೇವಲ ಹರಿಯಾಣಕ್ಕೆ ಮಾತ್ರವೇ ಆಗುತ್ತಾ, ಇಲ್ಲಾ ದೇಶದಾದ್ಯಂತ ಪರೀಕ್ಷೇಗಳು ರದ್ದಾಗುತ್ತಾ ಅನ್ನುವುದನ್ನು ಕಾದುನೋಡಬೇಕಿದೆ.