Heavy rain Alert School holidays : ಮಂಗಳೂರು : ಕಳೆದ ಒಂದು ವಾರದಿಂದಲೂ ನಿರಂತರವಾಗಿ ಮಳೆ ಸುರಿಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯ ಆರ್ಭಟ ಜೋರಾಗಿದ್ದು, ಮಂಗಳೂರು ತಾಲೂಕು ವ್ಯಾಪ್ತಿಯಲ್ಲಿ ಮಳೆ ಬಿರುಸು ಪಡೆದುಕೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರು ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾರ್ಥಮಿಕ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಮಂಗಳೂರು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರಾವಳಿ ಭಾಗದಲ್ಲಿ ಆರಿದ್ರಾ ಹಾಗೂ ಪುನರ್ವಸು ಮಳೆಯ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ಅದ್ರಲ್ಲೂ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜುಲೈ ೮ ರಂದು ಮಳೆಯ ಆರ್ಭಟ ಜೋರಾಗಿ ಇರಲಿದೆ. ತಗ್ಗು ಪ್ರದೇಶದಲ್ಲಿ ಇರುವವರು, ನದಿ, ಸಮುದ್ರ ತೀರದಲ್ಲಿ ವಾಸಿಸುತ್ತಿರುವವರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಮನವಿ ಮಾಡಲಾಗಿದೆ ಎಂದು ತಿಳಿಸಲಾಗಿದೆ.
ಇದನ್ನೂ ಓದಿ : ಮಹಿಳೆಯರಿಗೆ ಸಿಗಲಿದೆ 5000 ರೂ. ; ಹೊಸ ಯೋಜನೆ ಘೋಷಿಸಿದ ಪ್ರಧಾನ ನರೇಂದ್ರ ಮೋದಿ
ಉಡುಪಿ ಜಿಲ್ಲೆಯಲ್ಲಿ ರಜೆಯಿಲ್ಲ : ಹರಿದಾಡಿದ ನಕಲಿ ಆದೇಶ
ಉಡುಪಿ ಜಿಲ್ಲೆಯಲ್ಲಿಯೂ ಮಳೆ ಆರ್ಭಟಿಸುತ್ತಿದೆ. ಬ್ರಹ್ಮಾವರ ಹಾಗೂ ಕುಂದಾಪುರ ತಾಲೂಕಿನ ಶಾಲೆ, ಕಾಲೇಜುಗಳಿಗೆ ಜುಲೈ ೮ರಂದು ರಜೆ ಘೋಷಿಸಲಾಗಿದೆ ಎಂಬ ಕುರಿತು ಕುಂದಾಪುರ ವಿಭಾಗಾಧಿಕಾರಿಗಳ ಹೆಸರಲ್ಲಿ ನಕಲಿ ಆದೇಶ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆದರೆ ಅದು ನಕಲಿ ಎಂದು ಉಡುಪಿ ಜಿಲ್ಲಾಡಳಿತ ಸ್ಪಷ್ಟನೆಯನ್ನು ನೀಡಿದೆ.

ಬ್ರಹ್ಮಾವರ ಹಾಗೂ ಕುಂದಾಪುರ ತಾಲೂಕಿನ ಅಗತ್ಯ ಬಿದ್ದರೆ, ಪರಿಸ್ಥಿತಿಯನ್ನು ನೋಡಿಕೊಂಡು ಶಾಲೆಗಳಿಗೆ ರಜೆ ನೀಡುವ ಅಧಿಕಾರವನ್ನು ಆಯಾಯ ಶಾಲೆಗಳ ಮುಖ್ಯೋಪಾಧ್ಯಾಯರಿಗೆ ನೀಡಲಾಗಿದೆ ಎಂದು ಕುಂದಾಪುರ ವಿಭಾಗಾಧಿಕಾರಿ ರಶ್ಮಿ ಅವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : 7ನೇ ವೇತನ ಹೆಚ್ಚಳ ಯಾವಾಗ ಜಾರಿ ? ಯಾರಿಗೆ ಎಷ್ಟು ಹೆಚ್ಚಳ ? ಇಲ್ಲಿದೆ ಸಂಪೂರ್ಣ ಮಾಹಿತಿ
ಉತ್ತರ ಕನ್ನಡದ ಐದು ತಾಲೂಕುಗಳಲ್ಲಿ ರಜೆ ಘೋಷಣೆ
ಕರಾವಳಿ ಜಿಲ್ಲೆಗಳಲ್ಲಿ ಒಂದಾಗಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಮಳೆಯ ಆರ್ಭಟ ಜೋರಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲಾ ಹಾಗೂ ಕಾರವಾರ ತಾಲೂಕುಗಳ ಎಲ್ಲಾ ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಸೋಮವಾರ ಕೂಡ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಇದನ್ನೂ ಓದಿ : Beauty Sleep : ಚಿರಯವ್ವನ ಸದಾ ನಿಮ್ಮದಾಗಿರಬೇಕೇ ? ಹಾಗಾದ್ರೆ ಪ್ರತಿದಿನ ಎಷ್ಟು ಗಂಟೆ ನಿದ್ರಿಸಬೇಕು ಗೊತ್ತಾ ?
Heavy rain Alert holidays for schools and colleges in Mangalore and Uttara Kannada 4 Taluk on July 8