School college Holiday : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ : ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ಜುಲೈ 5 ರಂದು ರಜೆ ಘೋಷಣೆ (School college Holiday) ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಆದೇಶ ಹೊರಡಿಸಿದ್ದಾರೆ.

ಕಳೆದೊಂದು ವಾರದಿಂದಲೂ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಅದ್ರಲ್ಲೂ ಜಿಲ್ಲೆಯ ಬೆಳ್ತಂಗಡಿ, ಬಂಟ್ವಾಳ, ಪುತ್ತೂರು, ಸುಳ್ಯ, ಮಂಗಳೂರು ನಗರ ಸೇರಿದಂತೆ ಎಲ್ಲಾ ತಾಲೂಕುಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯ ಆರ್ಭಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನಿನ್ನೆ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿತ್ತು. ಆದ್ರೆ ಮುಂದಿನ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಮಳೆಯಿಂದ ಯಾವುದೇ ಸಮಸ್ಯೆಗಳು ಉಂಟಾಗದಂತೆ ಸುರಕ್ಷತಾ ಕ್ರಮವನ್ನು ಕೈಗೊಳ್ಳುವ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಎಲ್ಲಾ ಪದವಿ ಕಾಲೇಜುಗಳಿಗೆ ಇಂದು ರಜೆಯನ್ನು ಘೋಷಣೆ ಮಾಡಲಾಗಿದೆ.

ಉಡುಪಿ ಜಿಲ್ಲೆಯಲ್ಲಿಯೂ ಮಳೆಯ ಆರ್ಭಟ : ಹೆಬ್ರಿ ತಾಲೂಕಿನ ಶಾಲೆ ಕಾಲೇಜಿಗೆ ರಜೆ ಘೋಷಣೆ

ಉಡುಪಿ : ಕಳೆದ ಮೂರ್ನಾಲ್ಕು ದಿನಗಳಿಂದಲೂ ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಅದ್ರಲ್ಲೂ ಹೆಬ್ರಿ ತಾಲೂಕಿನಾದ್ಯಂತ ಮಳೆಯ ಆರ್ಭಟ ಜೋರಾಗಿದ್ದು, ನಾಳೆ ಹೆಬ್ರಿ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಉಡುಪಿ ಜಿಲ್ಲೆಯಾದ್ಯಂತ ಮುಂದಿನ ಎರಡು ದಿನಗಳ ಕಾಲ ಭಾರೀ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ ೫ರಂದು ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಅಂಗನವಾಡಿ, ಸರಕಾರಿ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪದವಿ ಪೂರ್ವ ಕಾಲೇಜು ಜೊತೆಗೆ ಪದವಿ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿ ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್.‌ ಆದೇಶ ಹೊರಡಿಸಿದ್ದಾರೆ. ಕರಾವಳಿ ಭಾಗದಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮಳೆ ಸುರಿಯಲಿದೆ.

ಇದನ್ನೂ ಓದಿ : Roshan’s dead body found : ಮರವಂತೆ ಬೀಚ್​ಗೆ ಕಾರು ಬಿದ್ದ ಪ್ರಕರಣ : ನಾಪತ್ತೆಯಾಗಿದ್ದ ರೋಷನ್​ ಮೃತದೇಹ ಪತ್ತೆ

ಇದನ್ನೂ ಓದಿ : ಉಡುಪಿ : ಭಾರೀ ಮಳೆ ಹಿನ್ನೆಲೆ, ಶಾಲೆ ಕಾಲೇಜಿಗೆ ನಾಳೆ ರಜೆ ಘೋಷಣೆ

Heavy rain Dakshin Kannada District School college Holiday

Comments are closed.