ಕೃತಿಕಾ ಮಳೆಯ ಅಬ್ಬರ : 1 ರಿಂದ 10ನೇ ತರಗತಿವರೆಗೆ ರಜೆ ಘೋಷಣೆ

ಹಾಸನ : ಕಳೆದ ರಾತ್ರಿಯಿಂದಲೂ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾಸನ ಜಿಲ್ಲೆಯಾದ್ಯಂತ ಒಂದರಿಂದ ಹತ್ತನೇ ತರಗತಿವರೆಗೆ ರಜೆ (school holiday) ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಕರ್ನಾಟಕದ ಕರಾವಳಿ, ಮಲೆನಾಡು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಅದ್ರಲ್ಲೂ ಹಾಸನ ಜಿಲ್ಲೆಯಲ್ಲಿ ನಿನ್ನೆ ರಾತ್ರಿಯಿಂದಲೇ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹಾಸನ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಹಾಸನ ಡಿಡಿಪಿಐ ಪ್ರಕಾಶ್‌ ರಜೆ ಘೋಷಿಸಿದ್ದಾರೆ.

ರಾಜ್ಯ ಹವಾಮಾನ ಇಲಾಖೆ ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆ ಸುರಿಯುವ ಕುರಿತು ಮುನ್ಸೂಚನೆಯನ್ನು ನೀಡಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯ ಹಿನ್ನೆಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಇನ್ನು ಮಳೆಯ ಹಿನ್ನೆಲೆಯಲ್ಲಿ ನೀಡಲಾಗಿದ್ದ, ರಜಾ ದಿನವನ್ನು ಸರಿದೂಗಿಸಲು ಬೇರೆ ರಜಾ ದಿನಗಳಂದು ತರಗತಿ ನಡೆಸುವಂತೆ ತಿಳಿಸಲಾಗಿದೆ.

ಇದನ್ನೂ ಓದಿ : Hardik Pandya new captain : ದಕ್ಷಿಣ ಆಫ್ರಿಕಾ ಟಿ20 ಸರಣಿಗೆ ಹಾರ್ದಿಕ್ ಪಾಂಡ್ಯ ನಾಯಕ

ಇದನ್ನೂ ಓದಿ : Red Alert : ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ: ಇಂದು ರೆಡ್ ಅಲರ್ಟ್ ಘೋಷಣೆ

heavy rain fall in Hasana: 1 to 10th school holiday declare

Comments are closed.