ದ.ಕ.ಜಿಲ್ಲೆಯ 5 ತಾಲೂಕುಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು : Heavy rain Holiday : ಕಳೆದ ಎರಡು ದಿನಗಳಿಂದಲೂ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕುಗಳ ಶಾಲೆ, ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು, ಮೂಲ್ಕಿ, ಉಳ್ಳಾಲ, ಮೂಡಬಿದಿರೆ ಹಾಗೂ ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಆದೇಶ ಹೊರಡಿಸಿದ್ದಾರೆ.

ನಿನ್ನೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ. ಇಂದೂ ಕೂಡ ಧಾರಾಕಾರ ಮಳೆ ಸುರಿಯುವ ಮುನ್ಸೂಚನೆಯಿದೆ. ಈ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ನಿನ್ನೆ ಸುರಿದ ಮಳೆಯಿಂದಾಗಿ ಮಂಗಳೂರು ನಗರದ ಹಲವು ಕಡೆಗಳಲ್ಲಿ ಮಳೆ ನೀರಿನಿಂದಾಗಿ ಭಾರೀ ಅವಾಂತರ ಸೃಷ್ಟಿಯಾಗಿತ್ತು. ಪಂಪ್‌ವೆಲ್‌ ಪ್ಲೈ ಓವರ್‌, ಕೊಟ್ಟಾರ ಚೌಕಿ ಪ್ರದೇಶಗಳಲ್ಲಿ ಹೆದ್ದಾರಿಯ ಮೇಲೆಯೇ ಮಳೆ ನೀರು ತುಂಬಿ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಇಂದೂ ಕೂಡ ಭಾರೀ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಮುಂದಿನ ನಾಲ್ಕು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಭಾರೀ ಮಳೆ ಸುರಿಯಲಿದೆ. ಈ ಹಿನ್ನೆಲೆಯಲ್ಲಿಂದು ಕರಾವಳಿ ಭಾಗದ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ. ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆಯನ್ನು ನೀಡಿದೆ. ಇನ್ನೊಂದೆಡೆಯಲ್ಲಿ ಮಳೆಹಾನಿ ಉಂಟಾಗುವ ಅನಾಹುತಗಳನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸಜ್ಜಾಗಿದೆ.

ಇದನ್ನೂ ಓದಿ : Heavy Rainfall in Karnataka : ರಾಜ್ಯದ ಈ 4 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ : ಹವಾಮಾನ ಇಲಾಖೆ ವರದಿ

ಇದನ್ನೂ ಓದಿ : CBSE Supplementary Exam Date 2023 : CBSE ತರಗತಿ 10, 12 ಪೂರಕ ಪ್ರಾಯೋಗಿಕ ಪರೀಕ್ಷೆ ಜುಲೈ 6 ರಿಂದ ಆರಂಭ

Comments are closed.